ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ತನಿಖೆ ಆರಂಭ; ಸ್ನೇಹಮಯಿ ಕೃಷ್ಣ ಕರೆತಂದು ಸ್ಥಳ ಮಹಜರು

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಮಂಗಳವಾರ ತನಿಖೆ ಆರಂಭಿಸಿದ್ದಾರೆ.

ಪ್ರಕರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಕರೆದುಕೊಂಡು ಹೋಗಿ ಮುಡಾ ನಿವೇಶನ ಬಳಿ ಸ್ಥಳ ಮಹಜರು ನಡೆಸಿದ್ದಾರೆ. ಮುಡಾ ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರ ಹೆಸರಿಗೆ ವರ್ಗಾವಣೆಯಾದ ಸೈಟ್ ವ್ಯವಹಾರದಲ್ಲಿ ಅಕ್ರಮವಾಗಿದೆಯೇ ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಈ ಮಧ್ಯೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿರುವ ಸ್ನೇಹಮಯಿ ಕೃಷ್ಣ, ತನಿಖೆಗೆ ನಾನು ಸಂಪೂರ್ಣವಾಗಿ ಅಧಿಕಾರಿಗಳಿಗೆ ಸಹಕಾರ ನೀಡುತ್ತೇನೆ. ತನಿಖೆಯಲ್ಲಿ ಯಾವುದೇ ರೀತಿಯ ದಾಖಲೆಗಳು ಬೇಕಿದ್ದರೆ ನನ್ನ ಬಳಿ ಇರುವ ದಾಖಲೆಗಳನ್ನು ನೀಡಲು ಸಿದ್ಧನಿದ್ದೇನೆ. ತನಿಖೆ ವೇಳೆ ಏನು ಕೇಳಿದರೂ ಕೊಡುತ್ತೇನೆ. ನಾನು ಪುರಾವೆ ಇಲ್ಲದೆ ಸುಳ್ಳು ಆರೋಪ ಮಾಡುವುದಿಲ್ಲ. ಈ ಪ್ರಕರಣದಲ್ಲೂ ನಾನು ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ ಎಂದರು.

No Comments

Leave A Comment