ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮೂಡಬಿದಿರೆ: ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

No Comments

Leave A Comment