ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಸ್ವಚ್ಛ ಭಾರತ್ ಅಭಿಯಾನಕ್ಕೆ ಉಡುಪಿ ಪರ್ಯಾಯ ಶ್ರೀಗಳಿ೦ದ ಚಾಲನೆ
ಉಡುಪಿ:ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀಕೃಷ್ಣ ಮಠ, ಉಡುಪಿ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಶ್ರೀಕೃಷ್ಣಮಠದ ಮುಖ್ಯದ್ವಾರದಬಳಿ ಪರಮಪೂಜ್ಯ ಪರ್ಯಾಯ ಶ್ರೀಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು.
ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯೆ ಮಾನಸ ಪೈ,ಮಠದ ದಿವಾನರಾದ ನಾಗರಾಜ ಆಚಾರ್ಯ, ರಮಣ ಆಚಾರ್ಯ,ಹಾಗೂ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಪ್ರಭಾರಿಗಳವರಾದ ವೆಂಕಟೇಶ್ ಮೆಹಂದಲೆ,ಜಗದೀಶ ಕುಮಾರ್, ಹರಿಪ್ರಸಾದ ಕೆ, ನಾಗರಾಜ್ ಶೇಟ್,ಡಿ.ಟಿ.ಅಮೀನ್,ಗಿರೀಶ್, ಶ್ರೀಪತಿ ಭಟ್,ಲಕ್ಷ್ಮೀ ಸುವರ್ಣ ಹಾಗೂ ಸದಸ್ಯರು ಉಪಸ್ಥಿತರಿದ್ದರು.