ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಪುಣೆ: ಹೆಲಿಕಾಪ್ಟರ್ ಪತನ : ಮೂವರು ಮೃತ್ಯು
ಪುಣೆ: ಮಹಾರಾಷ್ಟ್ರದ ಪುಣೆಯ ಬವ್‌ಧಾನ್‌ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಭೀಕರ ಅವಘಡ ಬುಧವಾರ (ಅ2) ಬೆಳಗ್ಗೆ ಸಂಭವಿಸಿದೆ.
ಸದ್ಯಕ್ಕೆ ದುರಂತಕ್ಕೀಡಾದ ಹೆಲಿಕಾಪ್ಟರ್ ಸರ್ಕಾರಿ ಅಥವಾ ಖಾಸಗಿಯೋ ಎಂದು ತಿಳಿದು ಬಂದಿಲ್ಲ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎನ್ನುವುದು ಸ್ಪಷ್ಟವಾಗಿ ತಿಳಿದು ಬಂದಿದೆ .
ಬೆಳಗ್ಗೆ 6.45ರ ಸುಮಾರಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.
ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯ ಮಾಧ್ಯಮ ವರದಿಗಳಿಂದ ತಿಳಿಯಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿ ತಿಳಿಯಲಾಗಿದೆ.