ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕಾರು ಹಿಂದಕ್ಕೆ ತೆಗೆಯುವಾಗ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಮನೆಯ ಅಂಗಳದಲ್ಲಿ ಕಾರು ಹಿಂದಕ್ಕೆ ತೆಗೆಯುವಾಗ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಸಂಭವಿಸಿದೆ.
ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ನವಾಫ್ ಇಸ್ಮಾಯಿಲ್ (10) ಮೃತ ಬಾಲಕ ಎಂದು ತಿಳಿದು ಬಂದಿದೆ.
ಮನೆಯ ಅಂಗಳದಲ್ಲಿದ್ದ ಕಾರನ್ನು ತೆಗೆಯುವ ವೇಳೆ ಆಕಸ್ಮಿಕವಾಗಿ ಬಾಲಕ ಕಾರಿನಡಿಗೆ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಕಾರ್ಯ ಮುಂದುವರೆಸಿದ್ದಾರೆ.