ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಲೈಂಗಿಕ ಕಿರುಕುಳ ಆರೋಪ: ಜಾನಿ ಮಾಸ್ಟರ್ ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು
ನವದೆಹಲಿ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮಾನತು ಮಾಡಿದೆ ಎಂದು ವರದಿಯಾಗಿದೆ.
ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್ ಪೊಲೀಸರು ಸೆಪ್ಟೆಂಬರ್ 19 ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಆದರೆ, ಅಕ್ಟೋಬರ್ 3 ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚಿಗೆ ಮಧ್ಯಂತರ ಜಾಮೀನು ಪಡೆದಿದ್ದರು.
ತಿರುಚಿತ್ರಂಬಲಂ’ ಚಿತ್ರದ ಮೇಘಮ್ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಅವರು ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇದೀಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ.
ಅಕ್ಟೋಬರ್ 8 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಾನಿ ಮಾಸ್ಟರ್ ಅವರಿಗೆ ನೀಡಿದ್ದ ಆಹ್ವಾನವನ್ನೂ ಹಿಂತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.