ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಲಿದ್ದಾರೆ: ಫಾರೂಕ್ ಅಬ್ದುಲ್ಲಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ 18 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿರುವ ಒಮರ್ ಅಬ್ದುಲ್ಲಾ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರ ತಂದೆ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಮಂಗಳವಾರ ಘೋಷಿಸಿದ್ದಾರೆ.

ಮಿತ್ರಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಫಾರೂಕ್ ಅಬ್ದುಲ್ಲಾ ಅವರು ತಿಳಿಸಿದ್ದಾರೆ.

ಮೈತ್ರಿಕೂಟದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ, “ಒಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗುತ್ತಾರೆ” ಎಂದು ಹೇಳಿದರು.

ಆರ್ಟಿಕಲ್ 370 ರದ್ದತಿಯನ್ನು ಜಮ್ಮು ಮತ್ತು ಕಾಶ್ಮೀರ ಜನ ವಿರೋಧಿಸುತ್ತಿದ್ದಾರೆ ಎಂಬುದಕ್ಕೆ ಈ ತೀರ್ಪು ಸಾಕ್ಷಿಯಾಗಿದೆ ಎಂದು ಫಾರೂಕ್ ಅಬ್ದುಲ್ಲಾ ಅವರು ಹೇಳಿದರು.

2019ರ ಆಗಸ್ಟ್ 5ರಂದು ಕೈಗೊಂಡ ನಿರ್ಧಾರಗಳು ತಮಗೆ ಸ್ವೀಕಾರಾರ್ಹವಲ್ಲ ಎಂಬುದನ್ನು ಜನತೆ ತಮ್ಮ ತೀರ್ಪಿನ ಮೂಲಕ ಸಾಬೀತುಪಡಿಸಿದ್ದಾರೆ. ಜನ ಮತದಾನದಲ್ಲಿ ಭಾಗವಹಿಸಿ ಮುಕ್ತವಾಗಿ ಮತದಾನ ಮಾಡಿದ್ದಕ್ಕಾಗಿ ನಾನು ಎಲ್ಲರಿಗೂ ಕೃತಜ್ಞನಾಗಿದ್ದೇನೆ ಎಂದರು.

“ಚುನಾಯಿತ ಸರ್ಕಾರವು ಜನರ “ಸಂಕಷ್ಟಗಳನ್ನು” ಪರಿಹರಿಸಲು ಸಾಕಷ್ಟು ಕೆಲಸ ಮಾಡುತ್ತದೆ ಎಂದು ಮಾಜಿ ಕೇಂದ್ರ ಸಚಿವರು ಹೇಳಿದರು.

“ನಾವು ನಿರುದ್ಯೋಗವನ್ನು ಕೊನೆಗೊಳಿಸಬೇಕು ಮತ್ತು ಹಣದುಬ್ಬರ, ಡ್ರಗ್ಸ್ ಹಾವಳಿಯಂತಹ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ. ಈಗ, ಲೆಫ್ಟಿನೆಂಟ್ ಗವರ್ನರ್ ಮತ್ತು ಅವರ ಸಲಹೆಗಾರರು ಇರುವುದಿಲ್ಲ. ಈಗ, ಜನರಿಗಾಗಿ ಕೆಲಸ ಮಾಡುವ 90 ಶಾಸಕರು ಇರುತ್ತಾರೆ” ಎಂದು ಅವರು ತಿಳಿಸಿದರು.

ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಬುದ್ಗಾಮ್ ಕ್ಷೇತ್ರದಲ್ಲಿ ಪಿಡಿಪಿಯ ಅಗಾ ಸೈಯದ್ ಮುಂತಜೀರ್ ಮೆಹದಿ ಅವರ ವಿರುದ್ಧ 18,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

No Comments

Leave A Comment