ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಮಂಗಳೂರು: ಹಲ್ಲೆ, ಜೀವ ಬೆದರಿಕೆಯೊಡ್ಡಿದ ಪ್ರಕರಣ; ಇಬ್ಬರ ಬಂಧನ
ಮಂಗಳೂರು: ಹಲ್ಲೆ, ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಘನ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳದ ಫರಂಗಿಪೇಟೆ ಕೊಡಿಮಜಲು ಹೌಸ್ ನಿವಾಸಿ ಮೊಹಮ್ಮದ್ ಅತಾವುಲ್ಲಾ(40), ಬಂಟ್ವಾಳದ ಫರಂಗಿಪೇಟೆ ಕುಂಜತ್ಕಲ್ ಹೌಸ್ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಚಿ(31) ದಸ್ತಗಿರಿ ಮಾಡಿದ ಆರೋಪಿಗಳು.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರ್ ಬ್ರಿಡ್ಜ್ ಬಳಿ ಕ್ಯಾಥೋಲಿಕ ಸಭಾಭವನ ವತಿಯಿಂದ ಅಕ್ಟೋಬರ್ 5 ರಂದು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಆಲ್ವಿನ್ ಜೆರೋಮ್ ಡಿಸೋಜಾ ಎಂಬವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 352, 115(2), 351(2), 109 ಜೊತೆಗೆ 3(5) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ಆರೋಪಿ ಮೊಹಮ್ಮದ್ ಅತಾವುಲ್ಲಾ ಎಂಬಾತನನ್ನು ಅ. 07 ರಂದು, ಆರೋಪಿ ತೌಸೀರ್ ಎಂಬಾತನನ್ನು ಅ. 08 ರಂದು ದಸ್ತಗಿರಿ ಮಾಡಲಾಯಿತು.
ದಸ್ತಗಿರಿ ಮಾಡಲಾದ ಆರೋಪಿತರ ಪೈಕಿ ಮಹಮದ್ ಅತಾವುಲ್ಲಾ ಎಂಬಾತನು ಘಟನಾ ಸಮಯದಲ್ಲಿ ದೂರುದಾರರಿಗೆ ಅವಾಚ್ಯವಾಗಿ ಬೈದು ಹಲ್ಲೆಗೆ ಪ್ರಚೋದನೆ ನೀಡಿದ್ದು ಹಾಗೂ ಅವಾಚ್ಯವಾಗಿ ಬೈದು ಹಲ್ಲೆ ಮಾಡಿದ ಪ್ರಮುಖ ಆರೋಪಿ ತೌಸಿರ್ ಯಾನೆ ಪತ್ತೊಂಜಿ ತೌಸಿರ್ ನ್ನು ದಸ್ತಗಿರಿ ಮಾಡಲಾಗಿರುತ್ತದೆ. ಪ್ರಕರಣದ ತನಿಖೆ ಮುಂದುವರೆದಿರುತ್ತದೆ.