ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ನವೆಂಬರ್ 1ರಂದು ಐಟಿಬಿಟಿ ಕಂಪೆನಿಗಳು, ಕಾರ್ಖಾನೆಗಳು ಕೂಡ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿ ಕೆ ಶಿವಕುಮಾರ್

ಬೆಂಗಳೂರು: ಈ ವರ್ಷ ನವೆಂಬರ್ 1ರಂದು 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲಾ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ  ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದೇಶ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವೆಂಬರ್ 1 ಕರ್ನಾಟಕಕ್ಕೆ ಮುಖ್ಯವಾಗಿದೆ. ಕನ್ನಡ ರಾಜ್ಯೋತ್ಸವ ಆಚರಿಸುವ ದಿನವಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವನಾಗಿ ನಾನು ಎಲ್ಲಾ ಕಂಪನಿಗಳು ಮತ್ತು ಶಿಕ್ಷಣ ಕೇಂದ್ರಗಳಿಗೆ ಕರ್ನಾಟಕ ಧ್ವಜಾರೋಹಣ ಮಾಡಲು ಆದೇಶಿಸುತ್ತಿದ್ದೇನೆ. ಬೆಂಗಳೂರಿನಲ್ಲಿ ಶೇಕಡಾ 50ರಷ್ಟು ಹೊರಗಿನ ಜನರಿದ್ದಾರೆ. ನವೆಂಬರ್ 1 ರಂದು ಕರ್ನಾಟಕ ಧ್ವಜವನ್ನು ಕಡ್ಡಾಯವಾಗಿ ಹಾರಿಸಬೇಕು, ನವೆಂಬರ್ 1ನೇ ದಿನಾಚರಣೆ ನಮಗೆ ಮುಖ್ಯವಾಗಿದೆ. ಆದರೆ ಆ ದಿನ ಎಲ್ಲಾ ಸಂಸ್ಥೆಗಳು ಮತ್ತು ಕಂಪನಿಗಳು ಕನ್ನಡ ಧ್ವಜವನ್ನು ಹಾರಿಸುವುದು ಕಡ್ಡಾಯವಾಗಿದೆ ಎಂದರು.

ಬೆಂಗಳೂರು ಜಿಲ್ಲೆಯಲ್ಲಿ ಶೇ 50 ರಷ್ಟು ಜನ ಹೊರಗಿನಿಂದ ಬಂದವರಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದರು.

ರಾಜ್ಯೋತ್ಸವ ಆಚರಣೆ: ಬೆಂಗಳೂರಿನಲ್ಲಿ ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ. ರಾಜ್ಯೋತ್ಸವ ಆಚರಣೆಗೆ ಯಾವ ಕನ್ನಡ ಸಂಘಟನೆಗಳು ಕೂಡ ಒತ್ತಡ ಹೇರಬಾರದು. ಸರ್ಕಾರವೇ ಆದೇಶಿಸಿದೆ. ಅದರಂತೆ ರಾಜೋತ್ಸವ ಆಚರಣೆ ಮಾಡುತ್ತಾರೆ. ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ನಿರ್ಧರಿಸಲಿದೆ. ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳ ಬಳಿ ಹೋಗಿ ಗಲಾಟೆ, ಬೆದರಿಸುವುದು ಬೇಡ ಎಂದು ಹೇಳಿದರು.

ಕೊರೊನಾ ಅಕ್ರಮ ಕುರಿತ ತನಿಖೆಗೆ ನನ್ನ ನೇತೃತ್ವದಲ್ಲಿ ಸಬ್ ಕಮಿಟಿ ಮಾಡಲಾಗಿದೆ. ಹಬ್ಬದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ಬಗ್ಗೆಯೂ ಮಾತನಾಡುತ್ತೇನೆ ಎಂದರು.

No Comments

Leave A Comment