ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ನಾಸಿಕ್‌: ಶೂಟಿಂಗ್ ಅಭ್ಯಾಸದ ವೇಳೆ ಶೆಲ್ ಸ್ಫೋಟ, ಇಬ್ಬರು ಅಗ್ನಿವೀರರು ಹುತಾತ್ಮ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆರ್ಟಿಲರಿ ಸೆಂಟರ್‌ನಲ್ಲಿ ಶೂಟಿಂಗ್ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್‌ನಿಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್‌ಗಳು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ ನಾಸಿಕ್ ರಸ್ತೆ ಪ್ರದೇಶದ ಆರ್ಟಿಲರಿ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದೆ. ಅಗ್ನಿವೀರ್‌ಗಳಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿಟ್ (21) ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ ಎಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗ್ನಿವೀರರ ತಂಡವೊಂದು ಭಾರತೀಯ ಫೀಲ್ಡ್ ಗನ್ ನ್ನು ಶೆಲ್ ಗಳಿಂದ ಸಿಡಿಸುತ್ತಿದ್ದಾಗ ಅವುಗಳಲ್ಲಿ ಒಂದು ಸ್ಪೋಟಗೊಂಡಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನೂ ದೇವಲಾಲಿಯ ಎಂ.ಎಚ್. ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಹುತಾತ್ಮರಾದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಹವಾಲ್ದಾರ್ ಅಜಿತ್ ಕುಮಾರ್ ನೀಡಿದ ದೂರಿನ ಮೇರೆಗೆ ದೇವಾಲಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

No Comments

Leave A Comment