ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ ಶ್ರೀ ಕೃಷ್ಣಮಠದಲ್ಲಿ ಕದಿರುಹಬ್ಬ

ಉಡುಪಿ:ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಪರ್ವವು ಶನಿವಾರದ೦ದು ವಿಜೃ೦ಭಣೆಯಿಒದ ನೆರವೇರಿತು .
ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣಪಲ್ಲಕ್ಕಿಯಲ್ಲಿಟ್ಟು ವಾದ್ಯ, ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆಯಲ್ಲಿ ಶ್ರೀಕೃಷ್ಣಮಠಕ್ಕೆ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು , ಆಸ್ಥಾನ ಪುರೋಹಿತರೊ೦ದಿಗೆ ತರಲಾಯಿತು .‌

ವರ್ಷಕ್ಕೆರಡು ಬಾರಿ ತೆರೆಯುವ ಗರ್ಭಗುಡಿಯ ಮೂಡಣ ದ್ವಾರ

ಕದಿರನ್ನು ಶ್ರೀಕೃಷ್ಣನ ಗರ್ಭಗುಡಿಯ ಮೂಡಣದ್ವಾರದ ಮೂಲಕವೇ ಒಳ ತಂದು ಕೃಷ್ಣನ ಮುಂದಿಟ್ಟು ಶ್ರೀಗಳು ಮಂಗಳಾರತಿ ಬೆಳಗಿದರು . ವಿಶೇಷವೆಂದರೆ ಹೊಸ್ತಿಲು ಹುಣ್ಣಿಮೆಯ ದಿನ ಮತ್ತು ಕದಿರಾರೋಹಣದ ದಿನಗಳ ಎರಡು ದಿನಗಳಂದು ಮಾತ್ರ ಗರ್ಭಗುಡಿಯ ಮೂಡಣ ದ್ವಾರ ತೆರೆಯಲಾಗುತ್ತದೆ .

ಅಲ್ಲಿಂದ ಕದಿರನ್ನು ಧಾನ್ಯ ಸಂಗ್ರಹಾಗಾರವಿರುವ ಬಡಗು ಮಾಳಿಗೆಗೆ ತಂದು ಆರತಿ ಬೆಳಗಲಾಯಿತು .‌ ಉಡುಪಿಯ ಅಷ್ಟ ಮಠಗಳು , ಇತರೆ ಮಠಗಳು ಹಾಗೂ ಆಸುಪಾಸಿನ ನೂರಾರು ಮನೆಗಳ ಭಕ್ತರಿಗೆ ಭತ್ತದ ತೆನೆಗಳನ್ನು ಪ್ರಸಾದವಾಗಿ ವಿತರಿಸಲಾಯಿತು . ದಿವಾನರುಗಳಾದ ನಾಗರಾಜ ಆಚಾರ್ಯ , ಪ್ರಸನ್ನಾಚಾರ್ಯ , ವಿದ್ವಾಂಸರುಗಳಾದ ಮಧ್ವರಮಾನಾಚಾರ್ಯ, ಗೋಪಾಲಾಚಾರ್ಯ ವೇದವ್ಯಾಸ ಪುರಾಣಿಕ , ಪುರೋಹಿತರಾದ ರಾಘವೇಂದ್ರ ಕೊಡಂಚ , ಕೊಟ್ಟಾರಿ ರಾಮ ಕೊಡಂಚ ,ನಾಗರಾಜತಂತ್ರಿ ಮೊದಲಾದವರಿದ್ದರು .

No Comments

Leave A Comment