ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
‘ಕಂಡುಕೇಳರಿಯದ ಭಾರಿ ಮಳೆ’; 50 ವರ್ಷಗಳ ಬಳಿಕ ಮೊದಲ ಬಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ-ಮೊರಾಕೊದಲ್ಲಿ ಮಳೆ 18 ಸಾವು
ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದೆ. ಅಚ್ಚರಿಯಾದರೂ ಇದು ಸತ್ಯ..
ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.
ಇದು ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಸಹರಾ ಮರುಭೂಮಿ ಪ್ರವಾಹಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ತಿಳಿಸಿದೆ.
ಮೊರಾಕ್ಕೋದಲ್ಲಿ ಭಾರಿ ಮಳೆಯೇ ಪ್ರವಾಹಕ್ಕೆ ಕಾರಣ
ಇನ್ನು ಆಗ್ನೇಯ ಮೊರಾಕೊದಲ್ಲಿ ಕಳೆದ ಎರಡು ದಿನಗಳ ಧಾರಾಕಾರ ಮಳೆ ಸುರಿಯುತ್ತಿದ್ದು, ಇದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಪ್ರವಾಹಕ್ಕೆ ಕಾರಣವಾಗಿದೆ. ಕಳೆದ 2 ದಿನಗಳಲ್ಲಿ ಸುರಿದ ಮಳೆ ಇಲ್ಲಿನ ವಾರ್ಷಿಕ ಸರಾಸರಿಯನ್ನೇ ಮೀರಿಸಿದ್ದು, ರಾಜಧಾನಿ ರಬತ್‌ನ ದಕ್ಷಿಣಕ್ಕೆ 450 ಕಿಮೀ ದೂರದಲ್ಲಿರುವ ಟಗೌನೈಟ್ ಗ್ರಾಮದಲ್ಲಿ ಕೇವಲ 24 ಗಂಟೆಗಳಲ್ಲಿ 100 ಮಿಮೀ ಮಳೆಯಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಮೊರಾಕೊದ ಹವಾಮಾನ ಸಂಸ್ಥೆಯ ಅಧಿಕಾರಿ ಹೂಸಿನ್ ಯೂಬೇಬ್, ‘ಕಳೆದ 50 ವರ್ಷಗಳಲ್ಲಿ ಇಷ್ಟು ಕಡಿಮೆ ಸಮಯದಲ್ಲಿ ಈ ಪರಿ ಭಾರಿ ಪ್ರಮಾಣದ ಮಳೆಯನ್ನು ನಾವು ನೋಡಿರಲಿಲ್ಲ. ಆಗ್ನೇಯದಲ್ಲಿ ಅಣೆಕಟ್ಟಿನ ಜಲಾಶಯಗಳು ಸೆಪ್ಟೆಂಬರ್‌ನಲ್ಲಿ ಅಭೂತಪೂರ್ವ ದರದಲ್ಲಿ ಮರುಪೂರಣಗೊಂಡಿವೆ ಎಂದು ಹೇಳಿದ್ದಾರೆ.
ಪ್ರವಾಹದ ಚಿತ್ರ ಬಿಡುಗಡೆ ಮಾಡಿದ ನಾಸಾ
ಇನ್ನು ನಾಸಾ ಸೆರೆಹಿಡಿದ ಉಪಗ್ರಹ ಚಿತ್ರಗಳು ಅರ್ಧ ಶತಮಾನದವರೆಗೆ ಝಗೋರಾ ಮತ್ತು ಟಾಟಾ ನಡುವಿನ ಒಣ ಸರೋವರದ ಇರಿಕಿ ಸರೋವರವು ಪ್ರವಾಹದಿಂದ ಮರುಪೂರಣಗೊಂಡಿದೆ ಎಂದು ಬಹಿರಂಗಪಡಿಸಿತು.
18 ಸಾವು….
ಇನ್ನು ಮೊರಾಕೊದಲ್ಲಿನ ಮಳೆ ಸಂಬಂಧಿತ ಪ್ರವಾಹ ಮತ್ತು ಇತರೆ ಕಾರಣಗಳಿಂದಾಗಿ ಈ ವರೆಗೂ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಉತ್ತರ, ಮಧ್ಯ ಮತ್ತು ಪಶ್ಚಿಮ ಆಫ್ರಿಕಾದಾದ್ಯಂತ 9 ದಶಲಕ್ಷ ಚದರ ಕಿಲೋಮೀಟರ್‌ಗಳಷ್ಟು ವ್ಯಾಪಿಸಿರುವ ಸಹರಾ ಮರುಭೂಮಿಯು ಜಾಗತಿಕ ತಾಪಮಾನ ಏರಿಕೆಯ ಕಾರಣದಿಂದಾಗಿ ವಿಪರೀತ ಹವಾಮಾನದಿಂದ ಹೆಚ್ಚುತ್ತಿರುವ ಬೆದರಿಕೆಗಳನ್ನು ಎದುರಿಸುತ್ತಿದೆ. ಭವಿಷ್ಯದಲ್ಲಿ ಭಾರಿ ಪ್ರಮಾಣದ ಬಿರುಗಾಳಿಗಳು ಈ ಪ್ರದೇಶದಲ್ಲಿ ಹೆಚ್ಚಾಗಿ ಆಗಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.