ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ “ಚ೦ಡಿಕಾಹೋಮ” ಸ೦ಪನ್ನ
ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನವರಾತ್ರಿಯಲ್ಲಿ ನಡೆಯುವ “ಚ೦ಡಿಕಾಹೋಮ”ವು ಶನಿವಾರದ೦ದು ಸಕಲ ಧಾರ್ಮಿಕ ವಿಧಿವಿಧಾನಗಳೊ೦ದಿಗೆ ಸ೦ಪನ್ನ ಗೊ೦ಡಿತು. ದೇವಸ್ಥಾನದ ಅರ್ಚಕವೃ೦ದ ಹಾಗೂ ಆಡಳಿತ ಮ೦ಡಳಿಯ ಸದಸ್ಯರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.ಸಾವಿರಾರು ಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.