ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅ.20ರವರೆಗೆ ಭಾರಿ ಮಳೆ, ಆರೆಂಜ್ ಅಲರ್ಟ್​

ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಕಲಬುರಗಿ, ಬೀದರ್​, ಬಾಗಲಕೋಟೆಯಲ್ಲಿ ಮಳೆಯಾಗಲಿದೆ. ಪಣಂಬೂರು, ಚಿಕ್ಕೋಡಿ, ಬೇಗೂರು, ರಾಯಲ್ಪಾಡು, ಗೌರಿಬಿದನೂರು, ತೊಂಡೇಭಾವಿ, ದಕ್ಷಿಣ ಕನ್ನಡ, ಸುಳ್ಯ, ಸೇಡಬಾಳ, ಚಿಕ್ಕಬಳ್ಳಾಪುರ, ಸಿರಾ, ನಾಪೋಕ್ಲು, ರಾಮನಗರ, ಶಿವಮೊಗ್ಗ, ಚಿಂತಾಮಣಿಯಲ್ಲಿ ಮಳೆಯಾಗಿದೆ.

ಪೊನ್ನಂಪೇಟೆ, ಮಾಗಡಿ, ಬೆಂಗಳೂರು ನಗರ, ಗುಬ್ಬಿ, ಸರಗೂರು, ಮಾಣಿ, ಹೊನ್ನಾವರ, ಬೆಳ್ತಂಗಡಿ, ರಬಕವಿ, ಧರ್ಮಸ್ಥಳ, ಕಾರ್ಕಳ, ನಿಪ್ಪಾಣಿ, ಮಧುಗಿರಿ, ಎಚ್​ಡಿ ಕೋಟೆ, ಹೊಸದುರ್ಗ, ಭಾಗಮಂಡಲ, ಚಿತ್ರದುರ್ಗ, ಪರಶುರಾಂಪುರ, ಚನ್ನಪಟ್ಟಣ, ತಿಪಟೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 25.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

No Comments

Leave A Comment