ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕಲಬುರಗಿಯಲ್ಲಿ ಸರಣಿ ಅಪಘಾತ: ನಾಲ್ವರು ಸಾವು
ಕಲಬುರಗಿ: ಕಲಬುರಗಿಯ ಜೇವರ್ಗಿ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾರಿ, ಕಾರು, ದ್ವಿಚಕ್ರ ವಾಹನಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮೃತರನ್ನು ರಾಘವೇಂದ್ರ (35), ಮುಜಾಹಿದ್ (30), ಹುಸೇನ್ ಬಿ (45) ಮೌಲಾಬಿ (50) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಆರು ಮಂದಿಯಲ್ಲಿ ಮೂವರು ಸಾವನ್ನಪ್ಪಿದ್ದು, ಉಳಿದವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
“ಅಪಘಾತಕ್ಕೆ ಒಳಗಾದ ಮೂರು ವಾಹನಗಳ ವಿರುದ್ಧ ನಾವು ಭಾರತೀಯ ನ್ಯಾಯ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಅಪಘಾತ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಅವರು ತಿಳಿಸಿದ್ದಾರೆ.