ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕೋಲ್ಕತ್ತಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ- ಐಸಿಯುನಲ್ಲಿದ್ದ ರೋಗಿ ಸಾವು
ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾನೆ.
ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದಲ್ಲಿರುವ ಇಎಸ್‌ಐ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು (ಅ.18) ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು.
ಈ ವೇಳೆ ಕೇವಲ 20 ನಿಮಿಷದಲ್ಲಿ 80 ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಮೊದಲು ಆಸ್ಪತ್ರೆಯ ಒಂದು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೇರೆ ಕೋಣೆಗಳಿಗೆ ಹರಡುವ ಮುನ್ನ ಬೆಂಕಿಯನ್ನು ಹತೋಟಿಗೆ ತರಲಾಯಿತು. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ.
ಕೆಲವು ರೋಗಿಗಳು ಬೆಂಕಿ ಕಾಣಿಸಿಕೊಂಡ ಬಳಿಕ ತಮ್ಮ ಆರೈಕೆದಾರರ ಜೊತೆ ಹೊರಗೆ ಬಂದಿದ್ದು, ಇನ್ನುಳಿದ ಕೆಲವರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಯಿತು. ಸದ್ಯ ಚಿಕಿತ್ಸೆಗಾಗಿ ರೋಗಿಗಳನ್ನು ಬೇರೆ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.