ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಗಾಜಾ ಆಸ್ಪತ್ರೆ ಸುತ್ತುವರೆದು ಇಸ್ರೇಲ್ ದಾಳಿ; ರೋಗಿಗಳು, ವೈದ್ಯಕೀಯ ಸಿಬ್ಬಂದಿಗೆ ಗಾಯ

ಬೈತ್ ಲಹಿಯಾದಲ್ಲಿರುವ ಇಂಡೊನೇಷ್ಯಾ ಆಸ್ಪತ್ರೆಯನ್ನು ಇಸ್ರೇಲ್ ಪಡೆಗಳು ಸುತ್ತುವರೆದು ದಾಳಿ ನಡೆಸಿದ್ದು, ಈ ದಾಳಿಯ ಪರಿಣಾಮ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಗಾಯಗಳಾಗಿವೆ ಎಂದು ಗಾಜಾದ ವೈದ್ಯಕೀಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಇಸ್ರೇಲ್ ಟ್ಯಾಂಕ್‌ಗಳು ಆಸ್ಪತ್ರೆಯನ್ನು ಸುತ್ತುವರಿದು, ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಎರಡು ಹಾಗೂ ಮೂರನೇ ಮಹಡಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ಈ ದಾಳಿಯಿಂದಾಗಿ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳು ಭಾರಿ ಅಪಾಯದಲ್ಲಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಸುಲ್ತಾನ್ ತಿಳಿಸಿದ್ದಾರೆ.

ದಾಳಿಯ ಪರಿಣಾಮ 40 ರೋಗಿಗಳು ಗಾಯಗೊಂಡಿದ್ದಾರೆ. ವೈದ್ಯಕೀಯ ಸಿಬ್ಬಂದಿಯೂ ಗಾಯಗೊಂಡಿದ್ದಾರೆ ಎಂದು ಗಾಜಾದ ವೈದ್ಯಕೀಯ ಇಲಾಖೆ ಹೇಳಿದೆ.

ಕದನ ವಿರಾಮದ ಒತ್ತಡದ ಹೊರತಾಗಿಯೂ ಉತ್ತರ ಗಾಜಾದಲ್ಲಿ ಇಸ್ರೇಲ್ ಆಕ್ರಮಣ ಮುಂದುವರಿದಿದೆ. ಆದರೆ ಹಮಾಸ್ ಬಂಡುಕೋರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದೇವೆ ಎಂದು ಇಸ್ರೇಲ್ ತಿಳಿಸಿದೆ.

 

No Comments

Leave A Comment