ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಪಾರ್ವತಿ ಮೇಲೆ ಮೈಸೂರಿನಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದು, ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ.

ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ 20 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್ 29 ರಂದು ಸಿಎಂ ಪತ್ನಿ ಪಾರ್ವತಿ ನೋಂದಣಿ ಮಾಡಿಸಿಕೊಂಡಿದ್ದಾರೆ. ನಗರದ ಕೆಆರ್‌ಎಸ್ ರಸ್ತೆಯಲ್ಲಿರುವ ಸರ್ವೇ ನಂಬರ್ 454ರ ಗಣೇಶ್ ದೀಕ್ಷಿತ್ ಎಂಬವರಿಗೆ ಸೇರಿದ 4 ಎಕರೆ 11 ಗುಂಟೆ ಜಾಗ ಅದು. ಅದರಲ್ಲಿ 20 ಗುಂಟೆ ಜಾಗವನ್ನ ಪಾರ್ವತಿ ಅವರು ಖರೀದಿ ಮಾಡಿದ್ದಾರೆ.

20 ಗುಂಟೆ ಜಾಗಕ್ಕೆ 1.85 ಕೋಟಿ ರೂ. ನೀಡಿದ್ದಾರೆ. ಅದರಲ್ಲಿ 8998 ಚದರಡಿ ಜಾಗವನ್ನು ಗಣೇಶ್ ದೀಕ್ಷಿತ್, ರಸ್ತೆ ಮತ್ತು ಪೈಪ್ ಲೈನ್ ಗೆಂದು ಮುಡಾಗೆ ಬಿಟ್ಟುಕೊಟ್ಟಿದ್ದರು. ಮುಡಾಗೆ ಬಿಟ್ಟು ಕೊಟ್ಟ ರಸ್ತೆ ಮತ್ತು ಪೈಪ್ ಲೈನ್‌ಗೆ ಸೇರಿದ್ದ ಜಾಗವನ್ನು ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡು ಪಾರ್ವತಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಆರೋಪ ಮಾಡಿದ್ದಾರೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತರು ಅರ್ಜಿ ಸಲ್ಲಿಸುತ್ತಿದ್ದಂತೆ ಎಚ್ಚೆತ್ತ ಪಾರ್ವತಿ ಅವರು 2024ರ ಆಗಸ್ಟ್ 30ರಂದು ಹಾಗೂ 31ರಂದು ಮತ್ತೆ ರಿಜಿಸ್ಟರ್ ತಿದ್ದುಪಡಿ ಮಾಡಿಸಿದ್ದಾರೆ. ಮುಡಾದ ಜಾಗವನ್ನು ಬಿಟ್ಟು ಇನ್ನುಳಿದ 12,782 ಚದರಡಿ ಜಾಗಕ್ಕೆ ಮಾತ್ರ ರಿಜಿಸ್ಟರ್ ಮಾಡಿಕೊಂಡಿದ್ದಾರೆ ಎಂದು ಗಂಗರಾಜು ತಿಳಿಸಿದ್ದಾರೆ.

No Comments

Leave A Comment