ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು
ಪುತ್ತೂರು: ಇಡೀ ರಾಜ್ಯ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯತ್ತ ಗಮನ ಹರಿಸಿದ್ದರೆ ಅತ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
ಕಿಶೋರ್ ಕುಮಾರ್ ಅವರು 3,654 ಮತ ಪಡೆದು ಗೆಲುವಿನ ನಗೆ ಬೀರಿದ್ದು, 1,957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಎಸ್‌ಡಿಪಿಐನ ಅನ್ವರ್ ಸಾದತ್ 195 ಮತ ಪಡೆದರು.
ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿರು. ಒಟ್ಟು 87 ಮತಗಳು ತಿರಸ್ಕೃತವಾಗಿದ್ದವು ಎನ್ನಲಾಗಿದೆ. ಈ ಕ್ಷೇತ್ರದಲ್ಲಿ 5,906 ಮತಗಳು ಚಲಾವಣೆಯಾಗಿದ್ದು, 5,819 ಸಿಂಧು ಮತಗಳಿದ್ದವು.
ಮತ ಎಣಿಕೆ ಇಲ್ಲಿನ ಕೊಡಿಯಾಲ್ ಬೈಲಿನ ಸೇಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು. ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರ ಸಮ್ಮುಖದಲ್ಲಿ ಮತ ಎಣಿಕೆ ನಡೆಯಿತು. ಕಿಶೋರ್ ಗೆಲುವು ಸಾಧಿಸುತ್ತಿದ್ದಂತೆಯೇ ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಅಂದಹಾಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಸ್ಥಾನ ಭರ್ತಿಗಾಗಿ ಉಪ ಚುನಾವಣೆ ನಡೆದಿದೆ. 2024 ರ ಅ.21ರಂದು ಮತದಾನ ನಡೆದಿತ್ತು.