ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಅಜೆಕಾರು: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ; ಆರೋಪಿ ಪತ್ನಿ ಸಹಿತ ಇಬ್ಬರ ಬಂಧನ

ಅಜೆಕಾರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ಹಿರ್ಗಾನದ ದಿಲೀಪ್ ಬಂಧಿತ ಆರೋಪಿಗಳು.

ಕರಣದ ಹಿನ್ನೆಲೆ: ಕಳೆದ 25 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರನ್ನು ಕಾರ್ಕಳದ ರೋಟರಿ ಆಸ್ಪತ್ರೆಗೆ ದಾಖಲಿಸಿದಾಗ ಪರೀಕ್ಷಿಸಿದ ವೈದ್ಯರು ಅವರಿಗೆ ಕಾಮಾಲೆ ರೋಗವಿದೆ ಎಂದು ತಿಳಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ, ಮಂಗಳೂರು, ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದ ಕಾರಣ ಅ.19 ರಂದು ಶನಿವಾರ ರಾತ್ರಿ ಮನೆಗೆ ಕರೆತರಲಾಗಿತ್ತು. ಮರುದಿನ ಅ.20 ರರಂದು ಬೆಳಗ್ಗಿನ ಜಾವ 3.30 ರ ಹೊತ್ತಿಗೆ ಬಾಲಕೃಷ್ಣ ಅವರು ಮೃತಪಟ್ಟಿದ್ದಾರೆ. ದಿಢೀರ್‌ ಕಾಣಿಸಿಕೊಂಡ ಅನಾರೋಗ್ಯದಿಂದ ಬಾಲಕೃಷ್ಣ ಅವರುಮೃತಪಟ್ಟಿದ್ದಾರೆ.

ದಿಢೀರ್‌ ಕಾಣಿಸಿಕೊಂಡ ಅನಾರೋಗ್ಯದಿಂದ ಬಾಲಕೃಷ್ಣ ಅವರು ಮೃತಪಟಿದ್ದರಿಂದ ಪ್ರತಿಮಾಳ ಅಣ್ಣ ಪದೇ ಪದೇ ವಿಚಾರಿಸಿದಾಗ ಸತ್ಯ ಬಯಲಾಗಿದೆ. ಪ್ರತಿಮಾ ಮತ್ತು ದಿಲೀಪ್ ತಮ್ಮ ಪಟಿದ್ದರಿಂದ ಪ್ರತಿಮಾಳ ಅಣ್ಣ ಪದೇ ಪದೇ ವಿಚಾರಿಸಿದಾಗ ಸತ್ಯ ಬಯಲಾಗಿದೆ. ಪ್ರತಿಮಾ ಮತ್ತು ದಿಲೀಪ್ ತಮ್ಮ ಗೆಳೆತನಕ್ಕೆ ಅಡ್ಡ ಬರುತ್ತಿದ್ದ ಬಾಲಕೃಷ್ಣ ಅವರನ್ನು ಕೊಲೆ ಮಾಡಲು ಯೋಚಿಸಿದ್ದದ್ದರು.

ಯೋಜನೆಯಂತೆ ದಿಲೀಪನು ಯಾವುದೋ ವಿಷ ಪದಾರ್ಥ ತಂದು, ಅದನ್ನು ಊಟದಲ್ಲಿ ಬೆರೆಸಿ ಕೊಟ್ಟರೆ ನಿಧಾನವಾಗಿ ಸಾಯುತ್ತಾರೆ ಎಂದು ಹೇಳಿಕೊಟ್ಟಿದ್ದ. ಅದರಂತೆ ನಾನು ಅವರಿಗೆ ಊಟದಲ್ಲಿ ಹಾಕಿ ಕೊಟ್ಟಿದ್ದೇನೆ. ನಂತರ ಬಾಲಕೃಷ್ಣ ಅವರಿಗೆ ಅಸೌಖ್ಯ ಉಂಟಾಗಿದ್ದು, ನಾನು ಹೇಳಿದಂತೆ ಅ.20 ರಂದು ಬೆಳಗಿನ ಜಾವ 01:30 ಗಂಟೆಗೆ ದಿಲೀಪನು ನಮ್ಮ ಮನೆಗೆ ಬಂದಿದ್ದು, ನಾವಿಬ್ಬರು ಸೇರಿ ಬೆಡ್‌ಶೀಟ್‌ ಅನ್ನು ಬಾಲಕೃಷ್ಣರ ಮುಖಕ್ಕೆ ಒತ್ತಿ ಹಿಡಿದು ಅವರನ್ನು ಕೊಲೆ ಮಾಡಿರುತ್ತೇವೆ ಎಂದು ಪ್ರತಿಮಾ ಒಪ್ಪಿಕೊಂಡಿರುವುದಾಗಿ ಬಾಲಕೃಷ್ಣ ಅವರ ತಮ್ಮ ರಾಮಕೃಷ್ಣ ಪೊಲೀಸರಿಗೆ ಘಟನೆಗೆ ಸಂಬಂಧಿಸಿ ಅಜೆಕಾರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 36/2024 ಕಲಂ: 61(1)(a), 103, 3(5) BNS ರಂತೆ ಪ್ರಕರಣ ದಾಖಲಾಗಿದೆ.

No Comments

Leave A Comment