ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಶಿಗ್ಗಾಂವಿ ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟ: ಸಂಧಾನಕ್ಕೆ ಬಂದಿದ್ದ ಜಮೀರ್ ಕಾರಿನ ಗಾಜು ಪುಡಿಪುಡಿ

ಹಾವೇರಿ, (ಅಕ್ಟೋಬರ್ 25): ಶಿಗ್ಗಾಂವಿ ಕಾಂಗ್ರೆಸ್​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಟಿಕೆಟ್ ವಂಚಿತ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್​​ ವಿರುದ್ಧ ಸಿಡಿದೆದ್ದಿದ್ದಾರೆ. ಹೌದು… ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ಅವರು ಇಂದು (ಅಕ್ಟೋಬರ್ 25) ನಾಮಪತ್ರ ಸಲ್ಲಿಸಿದರು. ಮತ್ತೊಂದೆಡೆ ಟಿಕೆಟ್​ ಸಿಗದಿದ್ದಕ್ಕೆ ಆಕ್ರೋಶಗೊಂಡಿರುವ ಅಜ್ಜಂಪೀರ್ ಖಾದ್ರಿ ಮತ್ತು ಮಂಜುನಾಥ ಕುನ್ನೂರು ಸಹ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೇನು ಕೊನೆಯ 13 ನಿಮಿಷ ಬಾಕಿ ಇರುವಾಗ ಖಾದ್ರಿ ಓಡೋಡಿ ಬಂದು ಚುನಾವಣಾಧಿಕಾರಿ ಮಹ್ಮದ್ ಖಿಝರ್​ ಅವರಿಗೆ ನಾಮಪತ್ರ ಸಲ್ಲಿಸಿ ಎಲ್ಲರ ಗಮನಸೆಳೆದಿದ್ದಾರೆ. ಇನ್ನು ಮಗ ರಾಜು ಕುನ್ನೂರಗೆ ‘ಕೈ’ ಟಿಕೆಟ್ ಕೇಳಿದ್ದ ಮಂಜುನಾಥ ಕುನ್ನೂರು ಸಹ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿ ಕಾಂಗ್ರೆಸ್​ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಶಿಗ್ಗಾಂವಿ ಕಾಂಗ್ರೆಸ್​ಗೆ ಬಂಡಾಯದ ಬಿಸಿ ತಟ್ಟಿದೆ.

ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಜ್ಜಂಪೀರ್ ಖಾದ್ರಿ, ನಾನು ಶಿಗ್ಗಾಂವ್ ಕ್ಷೇತ್ರದ ನಿವಾಸಿ. ಬಿಜೆಪಿ ಭರತ್ ಬೊಮ್ಮಾಯಿ ಹುಬ್ಬಳ್ಳಿ, ಕಾಂಗ್ರೆಸ್ ಅಭ್ಯರ್ಥಿ ಯಾಸೀನ್ ಖಾನ್ ಹಾನಗಲ್. ನಾನು ಮಾತ್ರ ಶಿಗ್ಗಾಂವ್ ಕ್ಷೇತ್ರದ ವ್ಯಕ್ತಿ.‌ಯಾವುದೇ ಕಾರಣಕ್ಕೂ ನಾನು‌ ನಾಮಪತ್ರ ಹಿಂದೆ ಪಡೆಯಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಸಂಧಾನಕ್ಕೆ ಬಂದ ಜಮೀರ್ ಕಾರಿನ ಗಾಜು ಪುಡಿಪುಡಿ

ಟಿಕೆಟ್​ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಅಜ್ಜಂಪೀರ್ ಖಾದ್ರಿ ಮನವೊಲಿಸಲು ಸಚಿವ ಜಮೀರ್​​ ಅಹಮ್ಮದ್ ಖಾನ್​ ಕಸರತ್ತು ನಡೆಸಿದ್ದಾರೆ. ಆದ್ರೆ, ಸಂಧಾನ ವಿಫಲವಾಗಿದ್ದು, ಖಾದ್ರಿ ಕೊನೆ ಕ್ಷಣದಲ್ಲಿ ಬೈಕ್​ನಲ್ಲಿ ದಾಖಲೆ ಹಿಡಿದು ಬಂದು ನಾಮಪತ್ರ ಸಲ್ಲಿಕೆ ಮಾಡಿದರು. ಇನ್ನು ಸಂಧಾನಕ್ಕೆ ಬಂದಿದ್ದ ಸಚಿವ ಜಮೀರ್​​ ಅಹಮ್ಮದ್ ಖಾನ್ ಕಾರಿನ ಮೇಲೆ ಖಾದ್ರಿ ಅಭಿಮಾನಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕಾರಿನ ಗಾಜು ಪುಡಿಪುಡಿಯಾಗಿದೆ.

ಕಾಂಗ್ರೆಸ್​​ಗೆ ಮಾಜಿ ಶಾಸಕರು ಮಗ್ಗಲು ಮುಳ್ಳು

ಅಜ್ಜಂಪೀರ್ ಖಾದ್ರಿ ಮಾತ್ರವಲ್ಲ. ಮಾಜಿ ಶಾಸಕ ಮಂಜುನಾಥ ಕುನ್ನೂರು ಅವರು ಸಹ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶಗೊಂಡಿದ್ದಾರೆ. ತಮ್ಮ ಪುತ್ರನಿಗೆ ಟಿಕೆಟ್​ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದ್ರೆ, ಕಾಂಗ್ರೆಸ್ ಪಠಾಣ್​ಗೆ ಮಣೆಹಾಕಿದ್ದರಿಂದ ಮಂಜುನಾಥ ಕುನ್ನೂರು ಮತ್ತು ಖಾದ್ರಿ ಕೆಂಡಮಂಡಲರಾಗಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಇದೀಗ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಕಾಂಗ್ರೆಸ್​​ಗೆ ಬಂಡಾಯದ ಬಿಸಿ ತಟ್ಟಿದೆ. ಇಬ್ಬರೂ ಮಾಜಿ ಶಾಸಕರು ಸಿಡಿದೆದ್ದಿದ್ದರಿಂದ ನಾಯಕರಿಗೆ ದಿಕ್ಕುತೋಚದಂತಾಗಿದೆ. ಅಲ್ಲದೇ ಅವರು ಯಾವುದೇ ಕಾರಣಕ್ಕೂ ನಾಮಪತ್ರ ವಾಪಡ್ ಪಡೆಯುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್​​ಗೆ ಇಬ್ಬರು ಮಾಜಿ ಶಾಸಕರು ಮಗ್ಗಲು ಮುಳ್ಳಾಗುವ ಸಾಧ್ಯತೆಗಳಿವೆ.

ಇದೇ ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಇದರಲ್ಲಿ ಬಿಜೆಪಿ ಗೆಲ್ಲುತ್ತೋ ಅಥವಾ ಎಲ್ಲಾ ಬಂಡಾಯದ ಬಿಸಿ ನಡುವೆ ಕಾಂಗ್ರೆಸ್​ ಅಭ್ಯರ್ಥಿ ಗೆದ್ದು ಬರುತ್ತಾರೋ ಎನ್ನುವುದನ್ನು ಕಾದುಬೋಡಬೇಕು.

 

kiniudupi@rediffmail.com

No Comments

Leave A Comment