ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮುಂಬೈ: ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 9 ಮಂದಿಗೆ ಗಾಯ

ಮುಂಬೈ: ಇಂದು ಭಾನುವಾರ ಬೆಳಗ್ಗೆ ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ರೈಲು ಹತ್ತುವ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.ಬಾಂದ್ರಾ ಟರ್ಮಿನಸ್‌ನ ಪ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ ಬೆಳಗ್ಗೆ 5.56ಕ್ಕೆ ಈ ಘಟನೆ ನಡೆದಿದೆ. 22921 ಬಾಂದ್ರಾ-ಗೋರಖ್‌ಪುರ ಎಕ್ಸ್‌ಪ್ರೆಸ್ ರೈಲು ಹತ್ತುವ ವೇಳೆ ವಿಪರೀತ ಜನದಟ್ಟಣೆ ಉಂಟಾಗಿತ್ತು ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ ಅಧಿಕಾರಿ ತಿಳಿಸಿದ್ದಾರೆ.

ಗಾಯಗೊಂಡ ಎಲ್ಲರನ್ನು ಭಾಭಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಶಭೀರ್ ಅಬ್ದುಲ್ ರೆಹಮಾನ್ (40ವ), ಪರಮೇಶ್ವರ ಸುಖದರ್ ಗುಪ್ತಾ (28ವ), ರವೀಂದ್ರ ಹರಿಹರ ಚುಮಾ (30ವ), ರಾಮಸೇವಕ ರವೀಂದ್ರ ಪ್ರಸಾದ್ ಪ್ರಜಾಪತಿ (29ವ), ಸಂಜಯ್ ತಿಲಕ್ರಂ ಕಾಂಗೇ (27ವ), ದಿವ್ಯಾಾಂಶು ಯೋಗೇಂದ್ರ ಯಾದವ್ (18ವ), ಮೊಹಮ್ಮದ್ ಎಂದು ಗುರುತಿಸಲಾಗಿದೆ. ಶರೀಫ್ ಶೇಖ್ (25ವ), ಇಂದ್ರಜಿತ್ ಸಹಾನಿ (19ವ) ಮತ್ತು ನೂರ್ ಮೊಹಮ್ಮದ್ ಶೇಖ್ (18ವ) ಎಂದು ಗುರುತಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment