ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಕಾಸರಗೋಡು ಪಟಾಕಿ ದುರಂತ: 150ಕ್ಕೂ ಹೆಚ್ಚು ಜನ ಗಾಯ-ಮಂಗಳೂರಿನಲ್ಲಿ 26 ಮಂದಿಗೆ ಚಿಕಿತ್ಸೆ

ಮಂಗಳೂರು: ಕೇರಳದ ನೀಲೇಶ್ವರಂನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ ಪಟಾಕಿ ಅವಘಡದಲ್ಲಿ 150ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆ ಪೈಕಿ 26 ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಲ್ಲಾ 26 ಮಂದಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಮೂವರು ಬರ್ನ್ ಇಂಟೆನ್ಸಿವ್ ಕೇರ್ ಯುನಿಟ್‌ಗಳಲ್ಲಿ(ಬಿಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇವರೆಲ್ಲರೂ ಕೇರಳ ರಾಜ್ಯದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯವರಾಗಿದ್ದು, ಮೂವರು ಏಳು ವರ್ಷದೊಳಗಿನ ಮಕ್ಕಳಾಗಿದ್ದು, ಅವರನ್ನು ಪೀಡಿಯಾಟ್ರಿಕ್ ಐಸಿಯುಗೆ ದಾಖಲಿಸಲಾಗಿದೆ ಮತ್ತು ಮೂವರಿಗೆ ಗಂಭೀರವಾದ ಸುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.

ಎಂಟು ರೋಗಿಗಳು 40 ರಿಂದ 70 ವರ್ಷ ವಯಸ್ಸಿನವರಾಗಿದ್ದಾರೆ ಮತ್ತು ಕಣ್ಣೂರು ಜಿಲ್ಲೆಯ 76 ವರ್ಷದ ಭರತನ್ ಅವರು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯಲ್ಲಿರುವ ಅವರ ಕುಟುಂಬ ಸದಸ್ಯರು ಪಿಟಿಐಗೆ ತಿಳಿಸಿದ್ದಾರೆ.

ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ಸೋಮವಾರ ಮಧ್ಯರಾತ್ರಿ ವೀರನಾರ್ಕವ್ ದೇವಸ್ಥಾನದಲ್ಲಿ ತೆಯ್ಯಂಕೆಟ್ಟು ಮಹೋತ್ಸವ ನಡೆಯುತ್ತಿತ್ತು. ಈ ಉತ್ಸವದ ವೇಳೆ ಪಟಾಕಿ ಸಿಡಿಸುವಾಗ, ಅಲ್ಲೇ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ತಗುಲಿದೆ. ಪಟಾಕಿಗಳು ಬಾಂಬ್​ ರೀತಿ ಸಿಡಿದಿವೆ. ಉತ್ಸವದಲ್ಲಿ ಸೇರಿದ್ದ ಜನರ ಮೇಲೆ ಪಟಾಕಿ ಕಿಡಿ ಸಿಡಿದಿದೆ. ಕೆಲವರ ಮೈಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 150ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

No Comments

Leave A Comment