ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಸ್ಮೃತಿ ಮಂಧಾನ ದಾಖಲೆಯ 8ನೇ ಶತಕ; ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದ ಭಾರತ
ಅಹಮದಾಬಾದ್: ಸ್ಮೃತಿ ಮಂಧಾನ ಅವರ ಭರ್ಜರಿ ಶತಕ ಹಾಗೂ ಹರ್ಮನ್‌ಪ್ರೀತ್ ಕೌರ್ ಅವರ ಅರ್ಧಶತಕದ ನೆರವಿನಿಂದ ಭಾರತ ವನಿತೆಯರ ತಂಡ ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದು ಬೀಗಿದೆ.
ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ದ ನಡೆದ ಮೂರನೇ ಮತ್ತು ನಿರ್ಣಾಯಕ ಏಕದಿನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ನ್ಯೂಜಿಲೆಂಡ್ ವಿರುದ್ಧ 2-1 ಅಂತರದಲ್ಲಿ ಏಕದಿನ ಸರಣಿಯನ್ನು ಭಾರತ ವಶಪಡಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 49.5 ಓವರ್‌ಗಳಲ್ಲಿ 232 ರನ್‌ಗಳಿಗೆ ಆಲೌಟ್ ಆಯಿತು. ಗೆಲುವಿಗೆ ನ್ಯೂಜಿಲೆಂಡ್ ನೀಡಿದ 233 ರನ್ ಗಳ ಗುರಿ ಬೆನ್ನತ್ತಿದ ಭಾರತ, ಉಪನಾಯಕಿ ಮತ್ತು ಅನುಭವಿ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರ ಶತಕದ ಜೊತೆಯಾಟ ತಂಡವನ್ನು ಗೆಲುವಿನ ದಡ ಮುಟ್ಟಿಸಿತು.
ಸ್ಮೃತಿ ಮಂಧಾನ ಅವರು ಇಂದು ತಮ್ಮ ಏಕದಿನ ವೃತ್ತಿಜೀವನದ ದಾಖಲೆಯ 8ನೇ ಶತಕ ಸಿಡಿಸಿದರು. ಈ ಮೂಲಕ ಏಕ ದಿನ ಪಂದ್ಯದಲ್ಲಿ ಏಳು ಶತಕ ಸಿಡಿಸಿದ್ದ ಮಿಥಾಲಿ ರಾಜ್‌ರನ್ನು ಹಿಂದಿಕ್ಕಿ ಅತಿ ಹೆಚ್ಚು ಶತಕ ಸಿಡಿಸಿದ ಭಾರತದ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾದರು.
ಇನ್ನು ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಅತ್ಯುತ್ತಮ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.
ಭಾರತದ ಪರ ದೀಪ್ತಿ ಶರ್ಮಾ 3 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರೆ, ಪ್ರಿಯಾ ಮಿಶ್ರಾ 2 ವಿಕೆಟ್, ರೇಣುಕಾ ಠಾಕೂರ್ ಸಿಂಗ್ ಮತ್ತು ಸೈಮಾ ಠಾಕೋರ್ ತಲಾ ಒಂದೊಂದು ವಿಕೆಟ್ ಪಡೆದರು.
ನ್ಯೂಜಿಲೆಂಡ್ ಪರ ಬ್ರೂಕ್ ಹ್ಯಾಲಿಡೆ ಅತಿ ಹೆಚ್ಚು ರನ್ ಗಳಿಸಿದರು. ಅವರು 86 ರನ್‌ಗಳ ಜವಾಬ್ದಾರಿಯುವ ಇನ್ನಿಂಗ್ಸ್ ಆಡಿದರು. ಜಾರ್ಜಿಯಾ ಪ್ಲಿಮ್ಮರ್ 39 ರನ್‌ಗಳ ಕೊಡುಗೆ ನೀಡಿದರು. ಇನ್ನುಳಿದ ಯಾವುದೇ ಬ್ಯಾಟರ್‌ಗಳು ತಂಡಕ್ಕೆ ಆಸರೆಯಾಗಲಿಲ್ಲ.