ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮುಡಾ ಹಗರಣ: ಮಾಜಿ ಆಯುಕ್ತ ಡಿಬಿ ನಟೇಶ್ ಇಡಿ ವಶಕ್ಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ ಹಗರಣ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನಟೇಶ್‌ ಮನೆ ಮೇಲೆ ನಿನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆಗೆ ಒಳಪಡಿಸಿದ್ದರು. ಪ್ರಸ್ತುತ ನಟೇಶ್‌ ಅವರನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದು ನಟೇಶ್ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ನಟೇಶ್ ಮುಡಾ ಆಯುಕ್ತರಾಗಿದ್ದಾಗ ಸಿಎಂ ಪತ್ನಿಗೆ ಸೈಟ್ ಹಂಚಿಕೆಯಾಗಿತ್ತು. ನಟೇಶ್ ವಿರುದ್ಧ ಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳನ್ನು ಅಕ್ರಮ ಹಂಚಿಕೆ ಮಾಡಿದ ಆರೋಪವಿದೆ. ವಿಚಾರಣೆ ವೇಳೆ ನಾನು ಯಾವುದೇ ತಪ್ಪು ಮಾಡಿಲ್ಲ. ಸರ್ಕಾರದ ಆದೇಶ ಚಾಚು ತಪ್ಪದೇ ಪರಿಪಾಲಿಸಿದ್ದೇನೆ ಎಂದು ಹೇಳಿದ್ದರು.

No Comments

Leave A Comment