ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

IND vs NZ: ಟೀಮ್ ಇಂಡಿಯಾ ವೈಟ್ ವಾಶ್: ನ್ಯೂಝಿಲೆಂಡ್ ತಂಡಕ್ಕೆ ಐತಿಹಾಸಿಕ ಸರಣಿ ಗೆಲುವು

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲೂ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ ಭಾರತದಲ್ಲಿ ಚೊಚ್ಚಲ ಬಾರಿಗೆ ಸರಣಿ ಗೆದ್ದುಕೊಂಡಿದೆ. ಅಂದರೆ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹಾಗೆಯೇ ಭಾರತ ತಂಡವನ್ನು 3-0 ಅಂತರದಿಂದ ಸೋಲಿಸಿ ತವರಿನಲ್ಲಿ ಟೀಮ್ ಇಂಡಿಯಾವನ್ನು ವೈಟ್ ವಾಶ್ ಮಾಡಿದ ಐತಿಹಾಸಿಕ ಸಾಧನೆಯನ್ನು ಸಹ ಮಾಡಿದೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಟಾಮ್ ಲ್ಯಾಥಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ ತಂಡವು ಡೇರಿಲ್ ಮಿಚೆಲ್ (82) ಅವರ ಅರ್ಧಶತಕದ ನೆರವಿನಿಂದ 235 ರನ್​ಗಳಿಸಿ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸಿದರೆ, ವಾಷಿಂಗ್ಟನ್ ಸುಂದರ್ 4 ವಿಕೆಟ್ ಪಡೆದು ಮಿಂಚಿದರು.

ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಶುಭ್​ಮನ್ ಗಿಲ್ (90) ಹಾಗೂ ರಿಷಭ್ ಪಂತ್ (60) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಎರಡು ಅರ್ಧಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 263 ರನ್​ ಕಲೆಹಾಕಿತು.

ಪ್ರಥಮ ಇನಿಂಗ್ಸ್​ನಲ್ಲಿನ 28 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಕಿವೀಸ್​ ಬ್ಯಾಟರ್​ಗಳು ಭಾರತೀಯ ಸ್ಪಿನ್ನರ್​ಗಳ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ನ್ಯೂಝಿಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 174 ರನ್​ಗಳಿಗೆ ಆಲೌಟ್ ಆಗಿದೆ. ಭಾರತದ ಪರ ರವೀಂದ್ರ ಜಡೇಜಾ 55 ರನ್ ನೀಡಿ 5 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಎನಿಸಿಕೊಂಡರು.

ಅತ್ತ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆಯೊಂದಿಗೆ 147 ರನ್​ಗಳ ಗುರಿ ಪಡೆದ ಭಾರತ ತಂಡವು ಕಳಪೆ ಆರಂಭ ಪಡೆಯಿತು. ಕೇವಲ 29 ರನ್​ಗಳಿಸುವಷ್ಟರಲ್ಲಿ ರೋಹಿತ್ ಶರ್ಮಾ (11), ಶುಭ್​ಮನ್ ಗಿಲ್ (1), ವಿರಾಟ್ ಕೊಹ್ಲಿ (1), ಯಶಸ್ವಿ ಜೈಸ್ವಾಲ್ (5) ಹಾಗೂ ಸರ್ಫರಾಝ್ ಖಾನ್ (1) ಪೆವಿಲಿಯನ್ ಸೇರಿದ್ದರು.

ಈ ಹಂತದಲ್ಲಿ ಜೊತೆಗೂಡಿದ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಭಾರತ ತಂಡಕ್ಕೆ ಆಸರೆಯಾಗಿ ನಿಂತರು. ಆದರೆ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ ಜಡೇಜಾ 6 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ರಿಷಭ್ ಪಂತ್ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಈ ಅರ್ಧಶತಕದ ಮೂಲಕ ಟೀಮ್ ಇಂಡಿಯಾ ಮೊತ್ತವನ್ನು 100ರ ಗಡಿದಾಟಿಸಿದ ರಿಷಭ್ ಪಂತ್ 57 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 64 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 46 ರನ್​ಗಳ ಅವಶ್ಯಕತೆಯಿತ್ತು.

ಆದರೆ ಆ ಬಳಿಕ ಬಂದ ಅಶ್ವಿನ್ 8 ರನ್​ಗಳಿಸಿ ಔಟಾದರೆ, ಆಕಾಶ್ ದೀಪ್ (0) ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.  ಅಂತಿಮವಾಗಿ 121 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟೀಮ್ ಇಂಡಿಯಾ 25 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಗೆಲುವಿನೊಂದಿಗೆ ನ್ಯೂಝಿಲೆಂಡ್ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದ್ದು, ಈ ಮೂಲಕ ಭಾರತ ತಂಡವನ್ನು ತವರಿನಲ್ಲೇ ವೈಟ್ ವಾಶ್ ಮಾಡಿದ ಐತಿಹಾಸಿಕ ಸಾಧನೆ ಮಾಡಿದೆ.

ನ್ಯೂಝಿಲೆಂಡ್: 235 & 174

ಭಾರತ: 263 & 121

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ರೋಹಿತ್ ಶರ್ಮಾ (ನಾಯಕ) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್) , ಸರ್ಫರಾಝ್ ಖಾನ್ , ರವೀಂದ್ರ ಜಡೇಜಾ , ವಾಷಿಂಗ್ಟನ್ ಸುಂದರ್ , ರವಿಚಂದ್ರನ್ ಅಶ್ವಿನ್ , ಆಕಾಶ್ ದೀಪ್ , ಮೊಹಮ್ಮದ್ ಸಿರಾಜ್.

No Comments

Leave A Comment