ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಕಟಪಾಡಿ: ನಿಂತಿದ್ದ ಲಾರಿಗೆ ಟೂರಿಸ್ಟ್ ಬಸ್ ಢಿಕ್ಕಿ : ಹಲವು ಪ್ರವಾಸಿಗರಿಗೆ ಗಂಭೀರ ಗಾಯ
ಕಟಪಾಡಿ: ಟೂರಿಸ್ಟ್ ವಾಹನಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಹಲವು ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ನ. 3 ರಂದು ಭಾನುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಕೊಲ್ಲೂರು ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಹೊರ ರಾಜ್ಯದ ಪ್ರವಾಸಿಗರ ಮಿನಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ.
ಳೀಯರ ಸಹಕಾರದಿಂದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟೂರಿಸ್ಟ್ ವಾಹನ ಜಖಂ ಗೊಂಡಿದೆ.
ಈ ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.