ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಮುಡಾ ಹಗರಣ: ಸಿಎಂಗೆ ಹೈಕೋರ್ಟ್​ ನೋಟಿಸ್​, ನ.26ಕ್ಕೆ ಸಿಬಿಐ ತನಿಖೆ ಭವಿಷ್ಯ

ಬೆಂಗಳೂರು, ನವೆಂಬರ್​ 05: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ  ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಸಿಬಿಐ (CBI) ನಡೆಸುವಂತೆ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ​​ ನವೆಂಬರ್​ 26ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ನಡೆದ ತನಿಖೆಯ ವರದಿಯನ್ನು ನವೆಂಬರ್​​ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.

ಸಿಬಿಐ, ಲೋಕಾಯುಕ್ತ ಪೊಲೀಸರು, ಪ್ರಕರಣದ ಎ1 ಸಿಎಂ ಸಿದ್ದರಾಮಯ್ಯ ಮತ್ತು ಎ2 ಪಾರ್ವತಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ. ಸ್ನೇಹಪ್ರಿಯ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದಮಂಡನೆ ಮಾಡಿದರು. ಮತ್ತು ಲೋಕಾಯುಕ್ತ ಪರವಾಗಿ ರಾಜ್ಯ ಅಭಿಯೋಜಕ ಬಿ.ಎನ್. ಜಗದೀಶ್ ವಾದ ಮಂಡಿಸಿದರು.

ವಾದ-ಪ್ರತಿವಾದ

ಕೆ.ಜಿ.ರಾಘವನ್: ಸಿಬಿಐ ತನಿಖೆಗೆ ಕೋರಿದ್ದೇವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ನ್ಯಾ. ಎಂ.ನಾಗಪ್ರಸನ್ನ: ಲೋಕಾಯುಕ್ತ ಪೊಲೀಸರು ತನಿಖೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಕೆ.ಜಿ.ರಾಘವನ್: ಸಾರ್ವಜನಿಕರ ನಂಬಿಕೆ ಉಳಿಯುವಂತೆ ತನಿಖೆ ಮಾಡಬೇಕಿದೆ ಎಂದು ವಾದ ಮಂಡಿಸಿದರು.

ಬಿ.ಎನ್. ಜಗದೀಶ್: ಎರಡು ವಾರ ಕಾಲಾವಕಾಶ ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್​ 26ಕ್ಕೆ ಮುಂದೂಡಿದೆ.

ವಿಚಾರಣೆಯಲ್ಲಿ ಲೋಕಾಯುಕ್ತ ಪೊಲೀಸ್, ಸಿಬಿಐ, ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಪ್ರತಿವಾದಿಗಳಾಗಿದ್ದಾರೆ. ಒಂದು ವೇಳೆ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶಿಸಿದರೆ ಲೋಕಾಯುಕ್ತರ ತನಿಖೆ ಸ್ಥಗಿತಗೊಳ್ಳಲಿದೆ. ಆಗ, ಮುಡಾ ಕೇಸ್​​ನಲ್ಲಿ ಸಿಎಂ ಸಿದ್ದರಾಮಯ್ಯಗೆ ಸಿಬಿಐ ತನಿಖೆ ಭೀತಿ ಎದುರಾಗಲಿದೆ. ಹೀಗಾಗಿ, ನ್ಯಾಯಾಲಯ ಲೋಕಾಯುಕ್ತ ಪೊಲೀಸರ ವಾದ ಆಲಿಸಿದೆ.

ಅಲ್ಲದೇ, ರಾಜ್ಯದಲ್ಲಿ ಸಿಬಿಐ ತನಿಖಗೆ ನೀಡಲಾಗಿರುವ ಮುಕ್ತ ಒಪ್ಪಿಗೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿತ್ತು.ಕ್ರಿಮಿನಲ್​ ಪ್ರಕರಣಗಳಲ್ಲಿ ಸಿಬಿಐ ತನಿಖೆಗೆ ಒಪ್ಪಿಗೆ ನೀಡಲು ಅನುವು ಮಾಡಿಕೊಡುವ ದೆಹಲಿ ವಿಶೇಷ ಪೊಲೀಸ್​ ಸ್ಥಾಪನೆ ಕಾಯಿದೆ, 1946ರ ಅಡಿಯಲ್ಲಿನ ಅಧಿಸೂಚನೆಯನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿತ್ತು.

No Comments

Leave A Comment