ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಕರ್ನಾಟಕದ ಈ 6 ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಭಾರಿ ಮಳೆ, ಯೆಲ್ಲೋ ಅಲರ್ಟ್
ಕರ್ನಾಟಕದ 6 ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 16.5 ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 28.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.