ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಇಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಮತದಾನ
ವಾಷಿಂಗ್ಟನ್, ನ.04,ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5) ಮತದಾನ ನಡೆಯಲಿದೆ. ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಕೊನೆಯ ದಿನವಾದ ಸೋಮವಾರ ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.
7.8 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ಮೇ ಲ್-ಇನ್’ಮೂಲಕ ಮತ ಚಲಾಯಿಸಿದ್ದಾರೆ ಎಂದು ಯುನಿವರ್ಸಿಟಿ ಆಫ್ ಫ್ಲೋರಿಡಾದ ಎಲೆಕ್ಷನ್ ಲ್ಯಾಬ್ ತಿಳಿಸಿದೆ.ಅಮೆರಿಕದ ಅಧ್ಯಕ್ಷರಾಗಲು 270 ಎಲೆಕ್ಟರ್ಗಳ ಬೆಂಬಲ ಬೇಕಿದೆ. ಪೆನ್ಸಿಲ್ವೇನಿಯಾ, ಮಿಷಿಗನ್, ಅರಿಜೋನಾ, ನೆವಾಡ, ವಿಸ್ಕಾನ್ಸಿನ್, ಉತ್ತರ ಕೆರೊಲಿನಾ ಮತ್ತು ಜಾರ್ಜಿ ಯಾನಿರ್ಣಾಯಕ ರಾಜ್ಯಗಳಾಗಿವೆ. ಕಮಲಾ ಹ್ಯಾರಿಸ್, ಕೊನೆಯ ದಿನ ಪೆನ್ಸಿಲ್ವೇ ನಿಯಾದಲ್ಲಿ ಐದು ರ್‍ಯಾಲಿಗಳಲ್ಲಿ ಭಾಗವಹಿಸಿದರು.