ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಬಂಟ್ವಾಳ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿ ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್ ಶರೀಫ್ (44) ಎಂದು ತಿಳಿಯಲಾಗಿದೆ.
ಈತ 2004ರ ನವೆಂಬರ್‌ನಲ್ಲಿ ಬಡಗಬೆಳ್ಳೂರಿನ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ.ಕರ್ನಾಟಕ ಮತ್ತು ಕೇರಳ ರಾಜ್ಯದ ಹಲವಾರು ಕಡೆ ವಿಳಾಸ ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೆ ಕಾಸರಗೋಡಿನ ಪುತ್ತಿಗೆಯಲ್ಲಿ ವಾಸವಾಗಿದ್ದ. ಪೊಲೀಸರು ಆತನ ಕುರಿತು ಬೇರೆ ಬೇರೆ ಆಯಾಮಗಳಿಂದ ಮಾಹಿತಿ ಕಲೆ ಹಾಕಿ ಕಾಸರಗೋಡಿನಿಂದ ವಶಕ್ಕೆ ಪಡೆದಿದ್ದಾರೆ.
ಈತನ ವಿರುದ್ಧ ಬಂಟ್ವಾಳ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಆರೋಪಿ ಮೊಹಮ್ಮದ್ ಶರೀಫ್‌ಇತ್ತೀಚಿಗೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.