ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

IPL 2025: ಮುಂಬೈ ಇಂಡಿಯನ್ಸ್ ತಂಡದ ನಾಯಕ ಆಯ್ಕೆ

IPL 2025: ಐಪಿಎಲ್ 2025 ರ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 5 ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಜಸ್​ಪ್ರೀತ್ ಬುಮ್ರಾ (18 ಕೋಟಿ ರೂ.), ಹಾರ್ದಿಕ್ ಪಾಂಡ್ಯ (16.35 ಕೋಟಿ ರೂ.), ಸೂರ್ಯಕುಮಾರ್ ಯಾದವ್ (16.35 ಕೋಟಿ ರೂ.), ರೋಹಿತ್ ಶರ್ಮಾ (16.30 ಕೋಟಿ ರೂ) ಹಾಗೂ ತಿಲಕ್ ವರ್ಮಾ (8 ಕೋಟಿ ರೂ.) ಮುಂಬೈ ಇಂಡಿಯನ್ಸ್ ತಂಡದಲ್ಲಿ ರಿಟೈನ್ ಆಗಿದ್ದಾರೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಒಟ್ಟು 5 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಐವರಲ್ಲಿ ನಾಲ್ವರು ಸ್ಟಾರ್ ಆಟಗಾರರಿದ್ದ ಕಾರಣ, ಈ ಬಾರಿ ಮುಂಬೈ ಪಡೆಯನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು.

ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಕಳೆದ ಸೀಸನ್​ನಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ ನೀಡಿರುವುದು. ಐಪಿಎಲ್ 2024 ರಲ್ಲಿ 14 ಪಂದ್ಯಗಳನ್ನಾಡಿದ್ದ ಮುಂಬೈ ಕೇವಲ 4 ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು.

ಹೀಗಾಗಿಯೇ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಬದಲಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್​ಗೆ ನಾಯಕತ್ವ ಒಲಿಯಲಿದೆ ಎನ್ನಲಾಗಿತ್ತು.
ಇದರ ಜೊತೆಗೆ ರೋಹಿತ್ ಶರ್ಮಾಗೆ ಮತ್ತೆ ಕ್ಯಾಪ್ಟನ್ಸಿ ನೀಡುವ ಸುದ್ದಿಗಳು ಕೂಡ ಕಾಣಿಸಿಕೊಂಡಿದ್ದವು.

ಆದರೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಹಾರ್ದಿಕ್ ಪಾಂಡ್ಯ ಅವರನ್ನೇ ನಾಯಕನನ್ನಾಗಿ ಮುಂದುವರೆಸಲು ನಿರ್ಧರಿಸಿದೆ. ಹೀಗಾಗಿ ಐಪಿಎಲ್ 2025 ರಲ್ಲೂ ಪಾಂಡ್ಯ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕಣಕ್ಕಿಳಿಯಲಿದೆ. ಇನ್ನು ತಂಡದ ಮುಖ್ಯ ಕೋಚ್ ಆಗಿ ಮಹೇಲ ಕಳೆದ ಸೀಸನ್​ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.

ಹೀಗಾಗಿ ಹಿಟ್​ಮ್ಯಾನ್ ಮುಂಬೈ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ 16.30 ಕೋಟಿ ರೂ.ಗೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿದಿದ್ದಾರೆ. ಇದರೊಂದಿಗೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯುವುದು ಕೂಡ ಖಚಿತವಾಗಿದೆ.

No Comments

Leave A Comment