ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಗಾಣಗಾಪುರದ ಶ್ರೀ ದತ್ತಾತ್ರೇಯನ ದರ್ಶನಕ್ಕೆ ತೆರಳುತ್ತಿದ್ದ ನಾಲ್ವರು ಅಪಘಾತದಲ್ಲಿ ಸಾವು
ಕಲಬುರಗಿ, ನವೆಂಬರ್ 09: ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಹೈದರಾಬಾದ್ ಮೂಲದ ಭಾರ್ಗವ ಕೃಷ್ಣ (55), ಸಂಗೀತಾ (45), ಉತ್ತಮ್ ರಾಘವನ್ (28) ಮತ್ತು ಕಾರು ಚಾಲಕ ಮೃತ ದುರ್ದೈವಿಗಳು. ಗೂಡ್ಸ್ ವಾಹನ ಚಾಲಕನಿಗೂ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರೂ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಕಮಲಾಪುರ ಸಿಪಿಐ ಭೇಟಿ ನೀಡಿ ಪರೀಶಿಲನೆ ನಡೆಸಿದರು.