ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್​ನಲ್ಲೂ ಜಾಮೀನು ನಿರಾಕರಣೆ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾದ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾ ಮಾಡಿದೆ.

ಕಳೆದ ಅ. 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾ.ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಾಲಯ, ಆರೋಪಿಯ ವಿರುದ್ಧ ಇನ್ನೂ ಹಲವು ದೂರುಗಳಿವೆ. ಇಷ್ಟು ಮಾತ್ರವಲ್ಲದೇ ಆರೋಪಿಯೂ ಸಾಕಷ್ಟು ಪ್ರಭಾವಶಾಲಿಯಾಗಿರುವ ಹಿನ್ನಲೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ವೇಳೆ ನಾನು 6 ತಿಂಗಳ ನಂತರ ಅರ್ಜಿ ಸಲ್ಲಿಸಬಹುದೇ? ಎಂದು ವಕೀಲ ರೋಹಟಗಿ ವಿನಂತಿಸಿದರು ಇದಕ್ಕೆ ನಾವು ಏನನ್ನೂ ಹೇಳುವುದಿಲ್ಲ ಎಂದು ನ್ಯಾಯಮೂರ್ತಿ ತ್ರಿವೇದಿ ಪ್ರತಿಕ್ರಿಯಿಸಿದರು.

ಪ್ರಜ್ವಲ್‌ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ವಿರುದ್ಧ ಕಳೆದ ಏಪ್ರಿಲ್‌ 28ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು.

No Comments

Leave A Comment