ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿಯಲ್ಲಿನಡೆಯಲಿರುವ ಬೃಹತ್ ಗೀತೋತ್ಸವಕ್ಕೆ ಕಾಂಚೀ ಶ್ರೀಗಳಿಗೆ ಆಹ್ವಾನ
ಉಡುಪಿ: ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯ ಅಂಗವಾಗಿ ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥತೀರ್ಥ ಶ್ರೀಪಾದರ ಮಹತ್ವಾಕಾಂಕ್ಷಿ ಯೋಜನೆಯಾದ ಭಗವದ್ಗೀತಾ ಕೋಟಿ ಲೇಖನ ಯಜ್ಞ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಆಯೋಜಿಸಲಾಗುವ ಬೃಹತ್ ಗೀತೋತ್ಸವ ಉದ್ಘಾಟನೆಗೆ ಕಾಂಚೀ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಯವರನ್ನು ಆಹ್ವಾನಿಸಲಾಯಿತು.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮೊಕ್ಕಾಂ ಹೂಡಿರುವ ಕಾಂಚೀ ಶ್ರೀಗಳನ್ನು ಪುತ್ತಿಗೆ ಶ್ರೀಪಾದರ ಅಪೇಕ್ಷೆ ಮೇರೆಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನಾಚಾರ್ಯ ಸಹಿತ ಅಧಿಕಾರಿಗಳು ಭೇಟಿ ಮಾಡಿ ಆಮಂತ್ರಣ ನೀಡಿದರು.
ಪುತ್ತಿಗೆ ಶ್ರೀಪಾದರ ಆಹ್ವಾನವನ್ನು ಮನ್ನಿಸಿದ ಕಾಂಚೀ ಶ್ರೀಗಳು ನ.20ರಂದು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಲು ಸಮ್ಮತಿಸಿದರು.
ಕಾಂಚಿ ಪೀಠದ ಈ ಹಿಂದಿನ ಯತಿಗಳಾಗಿದ್ದ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಪುತ್ತಿಗೆ ಶ್ರೀಪಾದರ ಅಪೇಕ್ಷೆಯಂತೆ ತೃತೀಯ ಪರ್ಯಾಯ ಸಂದರ್ಭದಲ್ಲಿ ನಡೆದ ನರತ್ನರಥಡಾ ಉದ್ಘಾಟನೆಗಾಗಿ ಉಡುಪಿಗೆ ಭೇಟಿ ನೀಡಿದ್ದನ್ನು ಸ್ಮರಿಸಬಹುದು.