ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ್ ಬಂಧನ-6ದಿನ ಪೊಲೀಸ್ ಕಸ್ಟಡಿಗೆ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ  ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ‌ ಎಂದು ತಿಳಿದು ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ (ನ.07) ಜಾಮೀನು ತಿರಸ್ಕರಿಸಿ ಆದೇಶ ನೀಡಿತ್ತು. ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ ಹುಡುಕಾಟ ನಡೆಸಿದ್ದರು. ಕೇರಳದ ಕ್ಯಾಲಿಕಟ್ ನಲ್ಲಿ ತಲೆಮರಸಿಕೊಂಡಿದ್ದ ಕೃಷ್ಣ ನಾಯ್ಕ್ ಅವರನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಲು ಯಶಸ್ವಿಯಾಗಿದ್ದಾರೆ.

ಕೃಷ್ಣ ನಾಯ್ಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಅವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಆರೋಪಿ ಕೃಷ್ಣ ನಾಯ್ಕ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.6ದಿನ ಪೊಲೀಸ್ ಕಸ್ಟಡಿಗೆ ಹಸ್ತಾ೦ತರಿಸಲಾಗಿದೆ.

No Comments

Leave A Comment