ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ರಸ್ತೆ ಬದಿ ಜಗಳವಾಡುತ್ತಿದ್ದವರಿಗೆ ವೋಲ್ವೋ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಸ್ತೆ ಬದಿ ನಿಂತು ಜಗಳವಾಡುತ್ತಿದ್ದವರಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರಿನ ಯಲಹಂಕ ಮೇಲ್ಸೇತುವೆಯಲ್ಲಿ ಮಂಗಳವಾರ ನಡೆದಿದೆ.

ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಮೇಲ್ಸೇತುವೆ ಮೇಲೆ ಇಬ್ಬರು ಬಲಭಾಗದಲ್ಲಿ ನಿಂತು ಜಗಳವಾಡುತ್ತಿದ್ದರು.

ಇದೇ ವೇಳೆ ಅತಿ ವೇಗವಾಗಿ ಬಂದ ಬಿಎಂಟಿಸಿ ವೋಲ್ವೊ ಬಸ್ ಲಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಯಲಹಂಕ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸದ್ಯ ಯಲಹಂಕ ಸಂಚಾರ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮೃತರ ಗುರುತಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಘಟನೆಯ ನಂತರ ಕ್ರೇನ್ ಮೂಲಕ ಕಾರು, ಲಾರಿ ಮತ್ತು ಬಸ್ ಅನ್ನು ಮೇಲಕ್ಕೆತ್ತಿ ಪ್ರಯಾಣಿಕರಿಗೆ ಸಂಚಾರ ಮುಕ್ತಗೊಳಿಸಲಾಯಿತು.

No Comments

Leave A Comment