ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬಿಜೆಪಿ ಸರ್ಕಾರದ ಕೊರೊನಾ ಹಗರಣದ ಮತ್ತಷ್ಟು ಸ್ಫೋಟಕ ಅಂಶ ಬೆಳಕಿಗೆ: ಬಿಎಸ್​ವೈ, ಶ್ರೀರಾಮುಲುಗೆ ಕುತ್ತು

ಬೆಂಗಳೂರು, (ನವೆಂಬರ್ 12): ಬಿಜೆಪಿ ವಿರುದ್ಧ ಕೊರೊನಾಸ್ತ್ರ ಹೂಡಿದ್ದ ಕಾಂಗ್ರೆಸ್, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ನಾ ಅವರ ನೇತೃತ್ವದಲ್ಲಿ ಆಯೋಗ ರಚಿಸಿದ್ದು, ಈ ಆಯೋಗ ಮಧ್ಯಂತರ ವರದಿ ನೀಡಿದೆ. ಈ ವರದಿ ಆಧರಿಸಿ ಆಗ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಮಾಜಿ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿದೆ. ಸರ್ಕಾರ ಸ್ಥಳೀಯ ಕಂಪನಿಗಳಿಂದ ಬರೀ 446 ರೂಪಾಯಿ ಪಿಪಿಇ ಕಿಟ್ ಖರೀದಿ ಮಾಡಿತ್ತು. ಆದ್ರೆ ಚೀನಾ ಕಂಪನಿಗಳಿಗೆ ಮಾತ್ರ 2 ಸಾವಿರದ 117 ರೂಪಾಯಿ ಕೊಟ್ಟಿತ್ತು. 2 ಕಂಪನಿಗಳ ಪಿಪಿಇ ಕಿಟ್ ಕೂಡ ಒಂದೇ ಗುಣಮಟ್ಟದ್ದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಈ ಮಾಹಿತಿಯನ್ನೆಲ್ಲಾ ಇದೇ ಇನ್​ಸೈಡ್ ಸುದ್ದಿಯಲ್ಲಿ ನಿಮ್ಮ ಮುಂದಿಟ್ಟಿದ್ವಿ. ಆದ್ರೆ ಈಗ ಮಧ್ಯಂತರ ವರದಿಯಲ್ಲಿರುವ ಸ್ಫೋಟಕ ಸುದ್ದಿ ಸಿಕ್ಕಿದೆ.

ಮಧ್ಯಂತರ ವರದಿಯಲ್ಲಿರೋದೇನು?

ಬಿಎಸ್​ವೈ, ರಾಮುಲು ಕಾರ್ಯವೈಖರಿಗೆ ಸಮಿತಿ ಅಕ್ಷೇಪ ವ್ಯಕ್ತಪಡಿಸಿದೆ. ಖಾಸಗಿ ಲ್ಯಾಬ್​ಗಳಿಗೆ 6.93ಕೋಟಿ ಹಣ ಸಂದಾಯವಾಗಿದೆ. ಆದ್ರೆ 14 ಲ್ಯಾಬ್​ಗಳು ICMRನಿಂದ ಮಾನ್ಯತೆ ಪಡೆದಿಲ್ಲ. ಈ ICMR ಲ್ಯಾಬ್​ಗಳು ಅಧಿಕೃತ ಅಲ್ಲ ಎಂದು ಜಾನ್ ಮೈಕೆಲ್ ಡಿ ಕುನ್ಹಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. RTPCR ಟೆಸ್ಟ್​ಗೆ ಲ್ಯಾಬ್​ಗಳ ಸಾಮರ್ಥ್ಯ, ಕ್ಷಮತೆ ಗುರುತಿಸಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಲ್ಯಾಬ್​ಗಳಿಗೆ ಅನುಮತಿ ನೀಡಲಾಗಿದೆ. 6 ಖಾಸಗಿ ಲ್ಯಾಬ್ ಗಳಿಗೆ ಒಪ್ಪಂದವಿಲ್ಲದೆ ಹಣ ಸಂದಾಯ ಮಾಡಲಾಗಿದೆ. ಅನಧಿಕೃತವಾಗಿ ಲ್ಯಾಬ್​ಗಳಿಗೆ ಹಣ ಸಂದಾಯದ ಬಗ್ಗೆ ಮಧ್ಯಂತರ ವರದಿ ನೀಡಲಾಗಿದೆ. 8 ಲ್ಯಾಬ್​ಗಳಿಗೆ ಅನುಮತಿ ಪಡೆಯದೆ 4.28 ಕೋಟಿ ಹಣ ನೀಡಲಾಗಿದೆ. ಕಾರ್ಯಾದೇಶವಿಲ್ಲದೆ ಖಾಸಗಿ ಲ್ಯಾಬ್​ಗಳು ಬಿಲ್ ನೀಡಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೋವಿಡ್ ಜಾಹೀರಾತಿನಲ್ಲೂ ಅಕ್ರಮ

ರಾಷ್ಟ್ರೀಯ ಆರೋಗ್ಯ ಮಿಷನ್ ಎಂಡಿ ಪಾರದರ್ಶಕತೆ ಅನುಸರಿಸದೆ ಆಯ್ದ ಲ್ಯಾಬ್​ಗಳಿಗೆ ಅನುಕೂಲ ಮಾಡಿರುವ ಆರೋಪ ಮಾಡಲಾಗಿದೆ. ಈ ಬಗ್ಗೆ ಮುಖ್ಯಕಾರ್ಯದರ್ಶಿಯಿಂದ ತನಿಖೆಗೆ ಶಿಫಾರಸು ಮಾಡಲಾಗಿದೆ. ಇಷ್ಟೇ ಅಲ್ಲ ಕೋವಿಡ್ ಜಾಹೀರಾತಿನಲ್ಲೂ ಅಕ್ರಮ ಎಸಗಿರುವ ಆರೋಪವೂ ಇದೆ. BMTC ಎಂಡಿ ಸಲಹೆ ಮೆರೆಗೆ ಯಾವುದೇ ಅನುಮತಿ ಪಡೆಯದೆ ಖಾಸಗಿ ಸಂಸ್ಥೆಗೆ 8.85ಲಕ್ಷ ಹಣ ಸಂದಾಯ ಮಾಡಲಾಗಿದೆ. 8ಲಕ್ಷ ಹಣ ವಸೂಲಿ ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಕೋವಿಡ್ ಆಪ್ತಮಿತ್ರ ಸೇವೆಯಲ್ಲಿ ಗೋಲ್ ಮಾಲ್ ಬಗ್ಗೆ ಮಾಹಿತಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ಅಗ್ರಿಮೆಂಟ್ ಇಲ್ಲದೆ BPO ಸರ್ವಿಸ್ ನೀಡಿರುವ ಆರೋಪದ ಹಿನ್ನೆಲೆ ಎರಡು ಬಿಪಿಒ ಸಂಸ್ಥೆಗಳ ವಿರುದ್ಧ ತನಿಖೆಗೆ ಶಿಫಾರಸು ಮಾಡಲಾಗಿದೆ.

ಇದು ಕೇವಲ ಮಧ್ಯಂತರ ವರದಿ

ಕೊರೊನಾ ಕಾಲದಲ್ಲಿ ಅಕ್ರಮ ಆಗಿದೆ ಎನ್ನುವುದು ಕುನ್ನಾ ಕಮೀಟಿ ವರದಿ ಹೇಳಿದೆ. ಮಾರುಕಟ್ಟೆ ದರಕ್ಕಿಂತ ಹೆಚ್ಚು ದರ ವಿಧಿಸಿ ಖರೀದಿ ಮಾಡಿದ್ದಾರೆ. ಬಿಜೆಪಿ ಹೆಣದ ಮೇಲೆ ಹಣ ಮಾಡಿದೆ. 49 ಕೋಟಿ ವಸೂಲಿ ಮಾಡಲು ಕುನ್ನಾ ಕಮೀಟಿ ವರದಿ ನೀಡಿದೆ. ವೈದ್ಯಕೀಯ ಶಿಕ್ಷಣ,ಆರೋಗ್ಯ ಇಲಾಖೆ ಭಾರಿ ಮೊತ್ತದ ಭ್ರಷ್ಟಾಚಾರ ಆಗಿದೆ. ಪಿಪಿಇ ಕಿಟ್,ಸಿಟಿ ಸ್ಕ್ಯಾನ್,ವೆಂಟಿಲೆಟರ್ ಖರೀದಿಯಲ್ಲಿ ಅವ್ಯವಹಾರವಾಗಿದೆ. ಈಗಾಗಲೇ ಇಲಾಖೆ ಹಿಂದಿನ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದೇವೆ. ಕಿದ್ವಾಯಿ ಅಸ್ಪತ್ರೆಯ ಆರ್ ಟಿಪಿಸಿಆರ್ ಟೆಸ್ಟಿಂಗ್ ನಲ್ಲಿ 200 ಕೋಟಿಗೂ ಹೆಚ್ಚು ಅವ್ಯವಹಾರ ಮಾಡಿದ್ದಾರೆ. ಇದು ಕೇವಲ ಮಧ್ಯಂತರ ವರದಿ. ಅಂತಿಮ ವರದಿಯಲ್ಲಿ ಇನ್ನು ಬಹಳಷ್ಟು ಭ್ರಷ್ಟಾಚಾರ ಬಯಲಾಗುತ್ತೆ ಎಂದರು.

kiniudupi@rediffmail.com

No Comments

Leave A Comment