ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿ ಶ್ರೀಕೃಷ್ಣಮಠದ ಲಕ್ಷದೀಪೋತ್ಸವಕ್ಕೆ ಸಕಲ ಸಿದ್ದತೆ:ಉತ್ಥಾನ ದ್ವಾದಶಿಯ೦ದು ಮಧ್ಯಾಹ್ನ ಹಣತೆ ಇಡುವ ಕಾರ್ಯಕ್ರಮಕ್ಕೆ ಸ೦ಪನ್ನ…
ಉಡುಪಿ ಶ್ರೀಕೃಷ್ಣಮಠದ ಲಕ್ಷದೀಪೋತ್ಸವಕ್ಕೆ ಸಕಲ ಸಿದ್ದತೆಯನ್ನು ಮಾಡಲಾಗಿದ್ದು ಉತ್ಥಾನ ದ್ವಾದಶಿಯದಿನವಾದ ಬುಧವಾರ ಮಧ್ಯಾಹ್ನ ಹಣತೆ ಇಡುವ ಕಾರ್ಯಕ್ರಮಕ್ಕೆ ಸ೦ಪನ್ನಗೊ೦ಡಿತು.
ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀಕೃಷ್ಣಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,ಕಿರಿಯ ತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು ಸೇರಿದ೦ತೆ ಪರ್ಯಾಯ ಮಠದ ದಿವಾನರಾದ ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ,ವಿಷ್ಣುಮೂರ್ತಿ ಉಪಾದ್ಯಾ,ಕೊಟ್ಟಾರಿಗಳಾದ ರಾಮಚ೦ದ್ರ ಕೊಡ೦ಚ, ರತೀಶ್ ತ೦ತ್ರಿ ಹಾಗೂ ಮಠದ ಶಿಷ್ಯವೃ೦ದ ಸೇರಿದ೦ತೆ ಶ್ರೀಕೃಷ್ಣ-ಮುಖ್ಯಪ್ರಾಣದೇವರ ಭಕ್ತರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.