ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ನ.17 ಮತ್ತು 18ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವದ ಸ೦ಭ್ರಾಮಾಚರಣೆ
ಉಡುಪಿ:ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮ ನ.17 ಮತ್ತು 18ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ಸಂಭ್ರಮದಿಂದ ನಡೆಯಲಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ.17ರ ಬೆಳಗ್ಗೆ 10 ಗಂಟೆಗೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ನ್ಯಾ. ಅರವಿಂದ್ ಕುಮಾರ್ ಕಾಠ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾ. ಎನ್.ವಿ ಅಂಜಾರಿಯಾ ಅಧ್ಯಕ್ಷತೆ ವಹಿಸಲಿದ್ದಾರೆ. ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಎಸ್. ಅಬ್ದುಲ್ ನಜೀರ್ ಉಪಸ್ಥಿತರಿರುವರು. ಹೈಕೋರ್ಟ್ ನ್ಯಾಯಾಧೀಶ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ನ್ಯಾ. ಇ.ಎಸ್. ಇಂದಿರೇಶ್ 125ರ ಸಂಭ್ರಮದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಅಡ್ವಕೇಟ್ ಜನರಲ್ ಶಶಿಕಿರಣ್ ಎಸ್. ಶೆಟ್ಟಿ, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್.
ಗಂಗಣ್ಣನವರ್ ಉಪಸ್ಥಿತರಿರುವರು. ಇದೇ ವೇದಿಕೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ. ಎಂ.ಜಿ. ಉಮಾ, ನ್ಯಾ. ರಾಮಚಂದ್ರ ಡಿ. ಹುದ್ದಾರ್ ಮತ್ತು ನ್ಯಾ. ಟಿ. ವೆಂಕಟೇಶ್ ನಾಯ್ಕ ಅವರನ್ನು ಸನ್ಮಾನಿಸಲಾಗುವುದು.
ನ.18ರ ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹೈಕೋರ್ಟ್ ನ್ಯಾಯಾಧೀಶ ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ವಹಿಸಲಿದ್ದಾರೆ. ಹೈಕೋರ್ಟ್ ನ್ಯಾಯಾಧೀಶ ಮತ್ತು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ನ್ಯಾ. ಇ.ಎಸ್. ಇಂದಿರೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ. ಶಿವಶಂಕರ್ ಬಿ. ನ್ಯಾ. ಅಮರಣ್ಣವರ್, ನ್ಯಾ. ಸಿ.ಎಂ. ಜೋಷಿ, ನ್ಯಾ. ಟಿ.ಜಿ ಶಿವಶಂಕರೇಗೌಡ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನ್ಯಾ. ಕಿರಣ್.ಎಸ್. ಗಂಗಣ್ಣನವರ್ ಉಪಸ್ಥಿತರಿರುವರು.
ಉಡುಪಿ ವಕೀಲರ ಸಂಘದ ಸದಸ್ಯರಾಗಿ, ನ್ಯಾಯಾಧೀಶರಾಗಿ ಮತ್ತು ಸರ್ಕಾರಿ ಅಭಿಯೋಜಕರಾಗಿ ಆಯ್ಕೆಯಾಗಿ ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿರುವ ಉಡುಪಿ ವಕೀಲರ ಸಂಘದ ಮಾಜಿ ಸದಸ್ಯರಿಗೆ ಮತ್ತು ವಕೀಲರ ಸಂಘದ ಮಾಜಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಗುವುದು.
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಉಡುಪಿ ವಕೀಲರ ಸಂಘದ ಸದಸ್ಯರಿಗೆ ನೀಡಲಾಗುವ ವಿಶಿಷ್ಟ ಆರೋಗ್ಯ ಕಾರ್ಡ್ ಅನ್ನು ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಸಮ್ಮುಖದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನ್ಯಾ. ಎಸ್.ವಿ. ಅಂಚಾರಿಯಾ ಬಿಡುಗಡೆ ಮಾಡುವರು ಎಂದರು.
ಈ ಸಂದರ್ಭದಲ್ಲಿ ವಿವಿಧ ಕಾನೂನು ಗೋಷ್ಠಿಗಳು, ಗಂಗಾವತಿ ಪ್ರಾಣೇಶ ಅವರಿಂದ ನಗೆಹೊನಲು ಕಾಠ್ಯಕ್ರಮ ನಡೆಯಲಿದೆ ಎಂದು ಮಟ್ಟಾರು ವಿವರಿಸಿದರು.
ಹಿರಿಯ ಸಿವಿಲ್ ನ್ಯಾಯಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಯೋಗೇಶ್ ಮಾತನಾಡಿ, ಇದು ಕೇವಲ ವಕೀಲರಿಗೆ ಸಂಬಂಧಿಸಿದ ಕಾರ್ಯಕ್ರಮವಲ್ಲ, ಸಾರ್ವಜನಿಕರು ಮುಕ್ತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಉಡುಪಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್, ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಬೈಲೂರು ರವೀಂದ್ರ ದೇವಾಡಿಗ, ಖಜಾಂಚಿ ಗಂಗಾಧರ ಎಚ್. ಎಂ. ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ವಕೀಲರ ಸಂಘ ವಿವಿಧ ಉಪ ಸಮಿತಿಗಳ ಮುಖ್ಯಸ್ಥರಾದ ಎಂ. ಶಾಂತಾರಾಮ್ ಶೆಟ್ಟಿ, ಅಸದುಲ್ಲಾ ಕಟಪಾಡಿ,ಎನ್.ಕೆ. ಆಚಾರ್ಯ, ಬಿ.ನಾಗರಾಜ್, ಆನಂದ ಮಡಿವಾಳ, ಸತೀಶ್ ಪೂಜಾರಿ, ಅಮೃತಕಲಾ, ಆರೂರು ಸುಕೇಶ್ ಶೆಟ್ಟಿ, ವಕೀಲರಾದ ಶಿವಾನಂದ್ ಆಮೀನ್ ಪಾಂಗಾಳ, ಶಶಿರಾಜ್ ಪೈಯ್ಯಾರ್, ಪ್ರಜ್ವಲ್ ಶೆಟ್ಟಿ, ಆಕಾಶ್ ಅಂಬಾಗಿಲು ಉಪಸ್ಥಿತರಿದ್ದರು.