ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಟಿಪ್ಪು ಸುಲ್ತಾನ್ ಖಡ್ಗ ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜು
ಲಂಡನ್:ನ.14ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ ಎಂದು ತಿಳಿದುಬಂದಿದೆ.
ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಈ ಖಡ್ಗವನ್ನು ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆಗಿನ ಬ್ರಿಟಿಷ್ ಸೇನೆಯ ಕ್ಯಾಪ್ಟನ್ ಜೇಮ್ಸ್ ಆಂಡ್ರ‍್ಯೂ ಡಿಕ್ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದರು. ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದುದಾಗಿದ್ದು, ‘ಸ್ಟೀಲ್ ತಲ್ವಾರ್’ ಮೈಸೂರಿನ ವಿಶಿಷ್ಟ ಲಕ್ಷಣವಾದ ‘ಬುಬ್ರಿ (ಟೈಗರ್ ಸ್ಟ್ರೈಪ್)’ ಅಲಂಕಾರವನ್ನು ಖಡ್ಗ ಹೊಂದಿದೆ.
ಕತ್ತಿಯನ್ನು ಉಡುಗೊರೆಯಾಗಿ ಪಡೆದಿದ್ದ ಡಿಕ್ 75 ನೇ ಹೈಲ್ಯಾಂಡ್ ರೆಜಿಮೆಂಟ್ ಆಫ್ ಫೂಟ್‌ನಲ್ಲಿ ಸೆರಿಂಗಪಟ್ಟಂನಲ್ಲಿ ಲೆಫ್ಟಿನೆಂಟ್ ಆಗಿ ಕರ್ತವ್ಯ ಸಲ್ಲಿಸಿದ್ದರು. ಯುದ್ಧದ ಬಳಿಕ ಟಿಪ್ಪುವಿನ ದೇಹವನ್ನು ಹುಡುಕುವಲ್ಲಿ ಅವನ ರೆಜಿಮೆಂಟ್ ಸಹಾಯ ಮಾಡಿತ್ತು.