ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬೋಳ: ಮನೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ : ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ವಶಕ್ಕೆ
ಕಾರ್ಕಳ: ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.
ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಬೋಳದ ಅವಿನಾಶ್ ಮಲ್ಲಿ ಎಂಬುವವರ ಎರಡು ಮನೆಗೆ ದಾಳಿ ನಡೆಸಿದ್ದು, ದುಬಾರಿ ಮೌಲ್ಯದ ಮದ್ಯದ ಬಾಟಲಿಗಳು ಬಾಕ್ಸ್‌ಗಳು ಕೂಡ ಪತ್ತೆಯಾಗಿದೆ. 200 ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ಇವು ನಕಲಿ ಮದ್ಯವೋ, ಅಸಲಿ ಮದ್ಯವೋ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.
ಗ್ರಾಮೀಣ ಭಾಗದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಅಧಿಕಾರಿಗಳು ದಂಗಾಗಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಶೀಲನೆ ನಡೆಯುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರ ವಿವರವಾದ ಮಾಹಿತಿ ನೀಡಲಾಗುವುದು ಎಂದು ಅಬಕಾರಿ ಡಿಸಿ ಬಿಂದು ತಿಳಿಸಿದ್ದಾರೆ.