ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಜಮೀರ್ ಅಹ್ಮದ್ ಗೆ ಕುಳ್ಳ ಎಂದು ಯಾವತ್ತೂ ಕರೆದಿಲ್ಲ: ಎಚ್ ಡಿ ಕುಮಾರಸ್ವಾಮಿ
ಮೈಸೂರು: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮ್ಮನ್ನು ‘ಕರಿಯಾ’ ಎಂದು ಕರೆದಿರುವ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು, ಕುಳ್ಳ ಎನ್ನುವ ಸಂಸ್ಕೃತಿ ನನ್ನದಲ್ಲ ಎಂದು ತಿರುಗೇಟು ನೀಡಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆಯುವ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದರು. ಬಳಿಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಜಮೀರ್ ಅಹ್ಮದ್ ಖಾನ್, ಪ್ರೀತಿಯಿಂದ ಅವರು ನನ್ನನ್ನು ‘ಕುಳ್ಳ’ ಎಂದು ಕರೆಯುತ್ತಿದ್ದರು. ನಾನು ಅವರನ್ನು ಕರಿಯಣ್ಣ ಎಂದು ಕರೆಯುತ್ತಿದ್ದೆ. ನನ್ನ ಹೇಳಿಕೆಯಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದರು.
ಜಮೀರ್ ಹೇಳಿಕೆ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಈ ಒಂದು ಹೇಳಿಕೆಯಿಂದ ಕಾಂಗ್ರೆಸ್ ಅಭ್ಯರ್ಥಿ ಸೋಲುವ ಸಾಧ್ಯತೆ ಇದೆ ಎನ್ನುವ ವಿಶ್ಲೇಷಣೆಗಳು ನಡೆಯುತ್ತಿವೆ.
ಸಚಿವ ಜಮೀರ್ ಹೇಳಿಕೆ ಬಗ್ಗೆ ಇದುವರೆಗೂ ಮೌನವಾಗಿದ್ದ ಕುಮಾರಸ್ವಾಮಿ ಇಂದು ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ಕುಳ್ಳ, ಕರಿಯ ಅನ್ನೋಕೆ, ನಾನು ಜಮೀರ್ ರೀತಿಯ ವಾತಾವರಣದಿಂದ ಬಂದಿಲ್ಲ. ಅವರ ಮಾತು ಅವರ ಸಂಸ್ಕೃತಿ ತೋರಿಸುತ್ತೆ. ಅವ್ರಿಗೆ ನಿಜಕ್ಕೂ ಮಾನ ಮರ್ಯಾದೆ ಇದಿಯಾ? ನಾವು ಈ ಹಿಂದೆ ಜೊತೆಯಾಗಿ ಇದ್ದಿದ್ದು ರಾಜಕೀಯವಾಗಿ ಮಾತ್ರ ಎಂದರು.
ಇದೇವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಸಿಎಂ, ಡಿಸಿಎಂ, ಗೃಹ ಸಚಿವರು ಈ ವಿಚಾರಕ್ಕೆ ಏನು ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿದೆ . ಈ ವಿಚಾರವನ್ನು ಡಿಫೆಂಡ್ ಮಾಡಿಕೊಂಡಿದ್ದಾರೆ. ಎಂಥ ಎಂತಹದ್ದೋ ಪ್ರಕರಣಗಳಲ್ಲಿ ಕೇಸ್ ಹಾಕಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದರೆ ಈ ಪ್ರಕರಣಕ್ಕೂ ಎಸ್ಐಟಿ ರಚನೆ ಮಾಡಿ ತನಿಖೆ ಮಾಡಲಿ.. ಈ ರೀತಿಯ ಸರ್ಕಾರವನ್ನು ನಾಗರಿಕ ಸರ್ಕಾರ ಅಂತ ನಾವು ಕರಿಬೇಕಾ? ಎಂದು ಕಿಡಿಕಾರಿದರು.