ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಮಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಕಾಲೇಜು ಉಪನ್ಯಾಸಕಿ

ಮಂಗಳೂರು: ನ.15ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಮಂಗಳೂರಿನ ಉಪನ್ಯಾಸಕಿಯೋರ್ವರು ಮೃತಪಟ್ಟಿದ್ದು, ಸಾವಿನಲ್ಲೂ ಅವರು ಸಾರ್ಥಕತೆ ಮೆರೆದಿದ್ದಾರೆ.

ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃತ ದುರ್ದೈವಿ.

ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದು ತೀವ್ರ ಅಸ್ವಸ್ಥರಾಗಿದ್ದರು. ಅವರನ್ನು ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಗ್ಲೋರಿಯಾ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ವೈದ್ಯರ ತಂಡ ತಿಳಿಸಿದೆ.

ಗ್ಲೋರಿಯಾ ಅವರಿಗೆ ಫುಡ್ ಅಲರ್ಜಿ(ಅನಾಫಿಲ್ಯಾಕ್ಟಿಕ್ ರಿಯಾಕ್ಷನ್) ಸಮಸ್ಯೆ ಇತ್ತು. ಹೀಗಾಗಿ ಈ ಹಿಂದೆಯೂ ಸ್ವಲ್ಪ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿ ಬಳಿಕ ಅವರು ಚೇತರಿಸಿಕೊಂಡಿದ್ದರು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಬಜಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ಟಾ ಫ್ಲೇವಿಯಾ ದಂಪತಿಯ ಪುತ್ರಿಯಾಗಿರುವ ಗ್ಲೋರಿಯಾ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿ ಉಪನ್ಯಾಸಕಿಯಾಗಿ ಕೆಲಸಕ್ಕೆ ಸೇರಿದ್ದರು. ಗ್ಲೋರಿಯಾ ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

ಇನ್ನು ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಗಳನ್ನು ಐದು ನಿರ್ಗತಿಕ ರೋಗಿಗಳಿಗೆ ದಾನ ಮಾಡಲಾಗಿದೆ. ಈ ಮೂಲಕ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಗ್ಲೋರಿಯಾ ಅವರ ಕಣ್ಣು, ಹೃದಯ, ಚರ್ಮ, ಯಕೃತ್, ಎರಡು ಕಿಡ್ನಿ, ಶ್ವಾಸಕೋಶವನ್ನು ದಾನ ಮಾಡಲಾಗಿದೆ. ಯಕೃತ್(ಲಿವರ್) ಮಂಗಳೂರಿನ ಎಜೆ ಆಸ್ಪತ್ರೆಗೆ, ಶ್ವಾಸಕೋಶವನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರಗೆ, ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ರವಾನಿಸಲಾಗಿದೆ. ಕಿಡ್ನಿಯನ್ನು ಕೆಎಂಸಿ ಆಸ್ಪತ್ರೆ ಮಣಿಪಾಲ ಹಾಗೂ ಚರ್ಮ ಹಾಗೂ ಕಣ್ಣುಗಳನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ನೀಡಲಾಗಿದೆ.

No Comments

Leave A Comment