ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಸುಪ್ರೀಂನಲ್ಲಿ ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಲು ಗೃಹ ಸಚಿವಾಲಯ ಒಪ್ಪಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್‌ಗೆ ಹೈಕೋರ್ಟ್ ನೀಡಿದ ಮಧ್ಯಂತರ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ.

ಬೆನ್ನು ನೋವಿನ ಚಿಕಿತ್ಸೆಗೆ 6 ವಾರಗಳ ಕಾಲಾವಕಾಶವನ್ನು ಕೋರ್ಟ್ ನೀಡಿದೆ. ದರ್ಶನ್‌ಗೆ ಜಾಮೀನು ಸಿಕ್ಕಿ 15 ದಿನಗಳ ಮೇಲಾಗಿದೆ. ಆದರೆ, ಈವರೆಗೆ ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆ ನೆರವೇರಿಲ್ಲ. ಅವರು ಹೊರಗಿದ್ದಷ್ಟು ದಿನ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದೇ ಇರುತ್ತದೆ. ಹೀಗಾಗಿ ದರ್ಶನ್‌ಗೆ ನೀಡಿದ್ದ ಜಾಮೀನನ್ನು ಪ್ರಶ್ನೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಇನ್ನು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ. ಗೃಹ ಸಚಿವಾಲಯ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.

ಅನಾರೋಗ್ಯದ ಕಾರಣಕ್ಕಾಗಿ ದರ್ಶನ್ ಅವರಿಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿತ್ತು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇನ್ನೂ ಕೂಡ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಜಾಮೀನಿನ ಅವಧಿ ಮುಗಿಯುವ ಸಂದರ್ಭದಲ್ಲಿ ದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾದರೆ ಅವರು ವಿಶ್ರಾಂತಿ ಪಡೆಯಲು ಮತ್ತಷ್ಟು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ. ಆಗ ದರ್ಶನ್ ಅವರು ಮತ್ತಷ್ಟು ದಿನ ಹೊರಗೆ ಇರಬೇಕಾಗುತ್ತದೆ. ಈ ಎಲ್ಲಾ ಅಂಶಗಳನ್ನು ಪೊಲೀಸರು ಮೇಲ್ಮನವಿ ಅರ್ಜಿಯಲ್ಲಿ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.

No Comments

Leave A Comment