ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಬೆಂಗಳೂರು: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಉದ್ಯಮಿ ಶವ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ

ಬೆಂಗಳೂರು: ಕಾರಿನಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿರುವಂತಹ ಸ್ಥಿತಿಯಲ್ಲಿ ಉದ್ಯಮಿಯೊಬ್ಬರ ಮೃತದೇಹ ಹತ್ತೆಯಾಗಿರುವ ಘಟನೆ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ನಾಗರಬಾವಿ ಎರಡನೇ ಹಂತದ 12ನೇ ಮುಖ್ಯರಸ್ತೆ ನಿವಾಸಿ, ಉದ್ಯಮಿ ಪ್ರದೀಪ್‌ (42) ಎಂದು ಗುರ್ತಿಸಲಾಗಿದೆ. ಮುದ್ದಿನಪಾಳ್ಯದ ಖಾಸಗಿ ಬಡಾವಣೆಯ ಖಾಲಿ ಜಾಗದಲ್ಲಿ ಈ ಘಟನೆ ನಡೆದಿದೆ.

ನವದೆಹಲಿಯ ನೋಂದಣಿ ಹೊಂದಿದ್ದ ಸ್ಕೋಡಾ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಅಧಿಕಾರಿಗಳು ಬೆಂಂಕಿ ನಂದಿಸಿದ್ದು, ಕಾರಿನಲ್ಲಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಮೃತದೇಹವನ್ನು ಪತ್ತೆ ಮಾಡಿದ್ದಾರೆ.

ಪ್ರದೀಪ್ ಅವರೇ ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇದೀಗ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬಿಎನ್‌ಎಸ್‌ಎಸ್ ಸೆಕ್ಷನ್ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ (ಪಶ್ಚಿಮ) ಎಸ್ ಗಿರೀಶ್ ಅವರು ತಿಳಿಸಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

No Comments

Leave A Comment