ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಕರ್ನಾಟಕ ರಕ್ಷಣಾ ವೇದಿಕೆಯ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ರವಿ.ಕೆ ಹೆಮ್ಮಾಡಿ ಆಯ್ಕೆ
ಕು೦ದಾಪುರ:ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಕುಂದಾಪುರ ತಾಲೂಕು ಘಟಕ ಅಧ್ಯಕ್ಷರಾಗಿ ರವಿ.ಕೆ ಹೆಮ್ಮಾಡಿ ರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಕುಂದಾಪುರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಇಂದು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆಯ್ಕೆಯಾದ ರವಿ.ಕೆ ಹೆಮ್ಮಾಡಿ ರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿರವರು ಸಂಘಟನೆಯ ಶಾಲು ಹೊದಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಜಿಲ್ಲಾ ಸಲಹೆಗಾರರು ಪ್ರಕಾಶ್ ದೇವಾಡಿಗ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಲ್ಫೋನ್ಸ್. ಗೋಪಾಲ್ ದೊರೆ, ಜಿಲ್ಲಾ ಮಹಿಳಾ ಉಪಾಧ್ಯಕ್ಷರು ಶ್ರೀಮತಿ ದೇವಕಿ ಬಾರ್ಕೂರು, ಜಿಲ್ಲಾ ಕಾರ್ಯದರ್ಶಿಯಾದ ಶ್ರೀಮತಿ ಮೋಹಿನಿ. ಜಿಲ್ಲಾ ಸದಸ್ಯರಾದ ಜೋಯಲ್. ಪ್ರವೀಣ್ ಉಪಸ್ಥಿತರಿದ್ದರು.