ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮಂಗಳೂರು: ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಾಚಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇಬ್ಬರಿಗೆ ಗುದ್ದಿ ಪರಾರಿಯಾಗಿರುವ ವಿಡಿಯೋ ವೈರಲ್
ಮಂಗಳೂರು: ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಾಚಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇಬ್ಬರಿಗೆ ಗುದ್ದಿ ಪರಾರಿಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ.
ರಸ್ತೆ ಮೇಲೆ ಅಷ್ಟೇನು ಟ್ರಾಫಿಕ್ ಇಲ್ಲದ ರಸ್ತೆಯಲ್ಲಿ ರಸ್ತೆದಾಟಲು ಇಬ್ಬರು ವ್ಯಕ್ತಿಗಳು ನಿಂತಿದ್ದು, ಈ ವೇಳೆ ಲಾರಿ ಮುಂದಕ್ಕೆ ಹೋಗಿದೆ. ಇದೇ ಸಂದರ್ಭದಲ್ಲಿ ಫುಟ್ ಪಾತ್ ಮೇಲೆ ನಿಂತಿದ್ದ ವ್ಯಕ್ತಿಗಳ ಮೇಲೆ ಏಕಾಏಕಿ ಕಪ್ಪುಬಣ್ಣದ ಕಾರೊಂದು ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯಾದ ರಭಸಕ್ಕೆ ಇಬ್ಬರು ವ್ಯಕ್ತಿಗಳು ಗಾಳಿಯಲ್ಲಿ 10 ಅಡಿ ಮೇಲೆ ಹಾರಿ ಸುಮಾರು ದೂರಕ್ಕೆ ಹಾರಿ ಬಿದ್ದಿದ್ದಾರೆ.
ಕನಿಷ್ಟ ಪಕ್ಷ ಅವರಿಗೆ ಏನಾಗಿದೆ ಎಂಬುದನ್ನೂ ನೋಡದ ಕಾರು ಚಾಲಕ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಬಿದ್ದ ರಭಸಕ್ಕೆ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಸಿಸಿಟಿವಿಯಲ್ಲಿ ದಾಖಲಾಗಿದ್ದ ಈ ಅಪಘಾತದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.