ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಮೂರು ವರ್ಷದ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವೃದ್ಧ ಅರೆಸ್ಟ್
ಮಂಗಳೂರು : ಮೂರು ವರ್ಷದ ಪುಟಾಣಿ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವೃದ್ಧನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುದುಂಗಾರುಕಟ್ಟೆ ನಿವಾಸಿ ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ. ಆರೋಪಿ ವ್ಯಕ್ತಿ ಅಡಿಕೆ ಖರೀದಿ ಅಂಗಡಿಯನ್ನು ಹೊಂದಿದ್ದು, ನವೆಂಬರ್ 21ರಂದು ಅಂಗಡಿ ಬಳಿಯಲ್ಲಿ ಆಟವಾಡುತ್ತಿದ್ದ ಹೆಣ್ಣು ಮಗುವಿಗೆ ಕಿರುಕುಳ ಕೊಟ್ಟಿದ್ದಾನೆಂದು ಆರೋಪಿಸಲಾಗಿದೆ. ಮಗು ಅಸಹಜವಾಗಿ ವರ್ತಿಸಿದ್ದರಿಂದ ಮಗುವಿನ ತಾಯಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಕೋಣಾಜೆ ಠಾಣೆಗೆ ತೆರಳಿ ಮಗುವಿನ ತಾಯಿ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆ ಮತ್ತು ಬಿಎನ್ಎಸ್ ಸೆಕ್ಷನ್ 65 ಪ್ರಕಾರ ಕೇಸು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.