ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ವಿಜಯೇಂದ್ರಗೆ ಸ್ವಾಭಿಮಾನ ಇದ್ದರೆ ರಾಜೀನಾಮೆ ನೀಡಬೇಕು: ಯತ್ನಾಳ್ ಕಿಡಿ
ಚಿಕ್ಕೋಡಿ:ನ.23ವಿಜಯೇಂದ್ರ ನಾಯಕತ್ವವನ್ನ ಜನ ತಿರಸ್ಕಾರ ಮಾಡಿದ್ದಾರೆ. ವಿಜಯೇಂದ್ರ ಅವರಿಗೆ ಸ್ವಾಭಿಮಾನ ಇದ್ದರೆ ಅವರೇ ರಾಜೀನಾಮೆ ನೀಡಬೇಕು. ವಿಜಯೇಂದ್ರ ನಾಚಿಕೆಗೇಡಾಗಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಚಿಕ್ಕೋಡೊಯಲ್ಲಿ ಬಿಜೆಪಿ ಸೋಲಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭರತ್ ಬೊಮ್ಮಾಯಿ ಸೋಲು ನಿಜಕ್ಕೂ ಆಘಾತ ತಂದಿದೆ. ರೌಡಿಯನ್ನ ಜನ ಆಯ್ಕೆ ಮಾಡಿದ್ದಾರೆ. ಜನರ ತೀರ್ಪು ಬಿಜೆಪಿ ನಾಯಕತ್ವ ಬದಲಾವಣೆ ಆಗಬೇಕು ಎನ್ನುವುದಿದೆ. ಹೊಸ ನಾಯಕತ್ವ ರಾಜ್ಯಕ್ಕೆ ಮತ್ತು ಬಿಜೆಪಿಗೆ ಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಸೋಲು ದುರ್ದೈವ. ಯೋಗೇಶ್ವರ ಅವರಿಗೆ ಟಿಕೆಟ್ ಕೊಡುವಂತೆ ನಾನು ಹೇಳಿದ್ದೆ. ಪಾಪ ಕೊನೆಯ ವರೆಗೂ ಯೋಗೇಶ್ವರ್ ಬಿಜೆಪಿ ಪರ ಒಲವು ತೋರಿದ್ದರು. ಜನ ಯೋಗೇಶ್ವರ್ ಕೆಲಸ ಮಾಡಿದ್ದನ್ನ ನೋಡಿ ಗೆಲ್ಲಿಸಿದ್ದಾರೆ. ಕುಮಾರಸ್ವಾಮಿ ಅವರು ಮುಂದೆ ಯೋಚನೆ ಮಾಡಿ ಪಕ್ಷ ಸಂಘಟನೆ ಮಾಡಬೇಕು. ಇನ್ನಾದರೂ ಬಿಜೆಪಿ, ಜೆ.ಪಿ.ನಡ್ಡಾ ಅವರು ಕಣ್ಣು ತೆರೆಯಬೇಕು ಎಂದು ತಿಳಿಸಿದರು.
ವಕ್ಫ್ ಹೋರಾಟ ಈಗ ಆರಂಭವಾಗಿದೆ ಪ್ರತಿಯೊಂದು ಜಿಲ್ಲೆಯಲ್ಲಿ ಜಾಗೃತಿ ಮೂಡಿಸುತ್ತೇವೆ. ಕಾಂಗ್ರೆಸ್ ಗೆದ್ದರೆ ಮುಂದೆ ರೈತರ ಜಮೀನು ಕೂಡ ಹೋಗುತ್ತವೆ. ಹೈಕಮಾಂಡ್ ಬಳಿ ವಿಜಯೇಂದ್ರ ವಿರುದ್ಧ ನಿಯೋಗ ತೆರಳುತ್ತಿವೆ. ಕೇವಲ ವಿಜಯೇಂದ್ರ, ಯಡಿಯೂರಪ್ಪ ಅವರಿಗೆ ಅಪಾಯಿಟ್‌ಮೆಂಟ್ ಕೊಟ್ಟರೆ ಹೀಗೆ ಆಗೋದು. ಬಿಜೆಪಿ ಹೈಕಮಾಂಡ್ ಬಳಿ ಅಪ್ಪ-ಮಕ್ಕಳ ಬಗ್ಗೆ ಹೇಳುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.